Matthew 24:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ದೇವಾಲಯದಿಂದ ಹೋಗುತ್ತಿದ್ದಾಗ ಆತನ ಶಿಷ್ಯರು ದೇವಾಲಯದ ಕಟ್ಟಡಗಳನ್ನು ತೋರಿಸಲು ಆತನ ಬಳಿಗೆ ಬಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಯೇಸು ದೇವಾಲಯದಿಂದ ಹೊರಟು ಹೋಗುತ್ತಿರಲು ಆತನ ಶಿಷ್ಯರು ದೇವಾಲಯದ ಕಟ್ಟಡಗಳನ್ನು ತೋರಿಸುವುದಕ್ಕೆ ಆತನ ಹತ್ತಿರಕ್ಕೆ ಬಂದರು.
Kannada BSI Bible 2016
ತರುವಾಯ ಯೇಸು ದೇವಾಲಯದಿಂದ ಹೊರಟುಹೋದ ಮೇಲೆ ಆತನ ಶಿಷ್ಯರು ಆ ದೇವಾಲಯದ ಕಟ್ಟಡಗಳನ್ನು ತೋರಿಸುವದಕ್ಕಾಗಿ ಆತನ ಬಳಿಗೆ ಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಯೇಸು ದೇವಾಲಯದಿಂದ ಹೊರಟು ಹೋಗುತ್ತಿರಲು ಆತನ ಶಿಷ್ಯರು ಆತನಿಗೆ ದೇವಾಲಯದ ಕಟ್ಟಣಗಳನ್ನು ತೋರಿಸುವದಕ್ಕೆ ಹತ್ತರಕ್ಕೆ ಬಂದರು.
Kannada Bible (KNCL) BSI 2016
ಯೇಸುಸ್ವಾಮಿ ಮಹಾದೇವಾಲಯವನ್ನು ಬಿಟ್ಟುಹೋಗುತ್ತಿದ್ದರು. ಅದರ ಕಟ್ಟಡಗಳತ್ತ ಅವರ ಗಮನ ಸೆಳೆಯಲು ಶಿಷ್ಯರು ಅವರ ಬಳಿಗೆ ಬಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ದೇವಾಲಯದಿಂದ ಹೊರಗೆ ಹೋದಾಗ ಅವರ ಶಿಷ್ಯರು ಆ ದೇವಾಲಯದ ಕಟ್ಟಡಗಳನ್ನು ತೋರಿಸುವುದಕ್ಕಾಗಿ ಯೇಸುವಿನ ಬಳಿಗೆ ಬಂದರು.