Matthew 24:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಭಯಂಕರವಾದ ನಾಶಕ್ಕೆ ಕಾರಣವಾದ ವಸ್ತುವೊಂದನ್ನು ಕುರಿತು ಪ್ರವಾದಿ ದಾನಿಯೇಲನು ಹೇಳಿದ್ದಾನೆ. ಈ ಭಯಂಕರವಾದ ವಸ್ತುವು ದೇವಾಲಯದ ಪರಿಶುದ್ಧ ಸ್ಥಳದಲ್ಲಿ ನಿಂತಿರುವುದನ್ನು ನೀವು ನೋಡುವಿರಿ. (ಇದನ್ನು ಓದುತ್ತಿರುವವನು ಇದರ ಅರ್ಥವನ್ನು ಗ್ರಹಿಸಿಕೊಳ್ಳಲಿ.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಪ್ರವಾದಿಯಾದ ದಾನಿಯೇಲನು ಹೇಳಿದ ಹಾಗೆ ವಿನಾಶಕಾರಕ, ವಿಕಾರ ವಸ್ತು ಪವಿತ್ರ ಸ್ಥಾನದಲ್ಲಿ ನಿಂತಿರುವುದನ್ನು ನೀವು ನೋಡುವಾಗ (ಇದನ್ನು ಓದುವವನು ತಿಳಿದುಕೊಳ್ಳಲಿ)
Kannada BSI Bible 2016
ಆದದರಿಂದ ಪ್ರವಾದಿಯಾದ ದಾನಿಯೇಲನಿಂದ ಹೇಳಲ್ಪಟ್ಟ ಹಾಳುಮಾಡುವ ಅಸಹ್ಯವು ಪರಿಶುದ್ಧ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದುವವನು ಗ್ರಹಿಸಲಿ)
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ಪ್ರವಾದಿಯಾದ ದಾನಿಯೇಲನು ಹೇಳಿದಂಥ ಹಾಳುಮಾಡುವ ಅಸಹ್ಯ ವಸ್ತುವು ಪವಿತ್ರಸ್ಥಾನದಲ್ಲಿ ನಿಂತಿರುವದನ್ನು ನೀವು ಕಾಣುವಾಗ (ಇದನ್ನು ಓದುವವನು ತಿಳುಕೊಳ್ಳಲಿ)
Kannada Bible (KNCL) BSI 2016
“ಪ್ರವಾದಿ ದಾನಿಯೇಲನು ಸೂಚಿಸಿರುವ ‘ವಿನಾಶಕರ ವಿಕಟ ಮೂರ್ತಿ’ ಪವಿತ್ರಸ್ಥಾನದಲ್ಲಿ ನಿಂತಿರುವುದನ್ನು ನೀವು ಕಾಣುವಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದ್ದರಿಂದ ಪ್ರವಾದಿ ದಾನಿಯೇಲನಿಂದ ಹೇಳಿದ ಹಾಗೆ ‘ಅಸಹ್ಯ ವಸ್ತು’ ಪವಿತ್ರ ಸ್ಥಳದಲ್ಲಿ ನಿಂತಿರುವುದನ್ನು ನೀವು ಕಾಣುವಾಗ, ಓದುವವನು ತಿಳಿದುಕೊಳ್ಳಲಿ.