Matthew 24:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ದೇವರು ಭಯಂಕರವಾದ ಆ ಸಮಯವನ್ನು ಕಡಿಮೆಗೊಳಿಸಲು ತೀರ್ಮಾನಿಸಿದ್ದಾನೆ. ಇಲ್ಲವಾದರೆ, ಜೀವದಿಂದ ಉಳಿಯಲು ಯಾರಿಗೂ ಸಾಧ್ಯವಿಲ್ಲ. ತಾನು ಆರಿಸಿಕೊಂಡ ಜನರ ನಿಮಿತ್ತ ದೇವರು ಆ ಸಮಯವನ್ನು ಕಡಿಮೆ ಮಾಡಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಒಬ್ಬ ನರಪ್ರಾಣಿಯಾದರೂ ಉಳಿಯನು; ಆದರೆ ತಾನು ಆರಿಸಿಕೊಂಡವರಿಗೋಸ್ಕರ ಆ ದಿನಗಳನ್ನು ಕಡಿಮೆಮಾಡುವನು.
Kannada BSI Bible 2016
ಆ ದಿವಸಗಳು ಕಡಿಮೆ ಮಾಡಲ್ಪಡದಿದ್ದರೆ ಯಾವನೂ ಉಳಿಯು ವದಿಲ್ಲ; ಆದರೆ ಆಯಲ್ಪಟ್ಟವರಿಗಾಗಿ ಆ ದಿವಸಗಳು ಕಡಿಮೆ ಮಾಡಲ್ಪಡುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
[ಕರ್ತನು] ಆ ದಿನಗಳನ್ನು ಕಡಿಮೆಮಾಡದಿದ್ದರೆ ಒಂದು ನರಪ್ರಾಣಿಯಾದರೂ ಉಳಿಯದು; ಆದರೆ ತಾನು ಆದುಕೊಂಡವರಿಗೋಸ್ಕರ ಆ ದಿನಗಳನ್ನು ಕಡಿಮೆಮಾಡುವನು.
Kannada Bible (KNCL) BSI 2016
ಆ ದಿನಗಳ ಅವಧಿಯನ್ನು ಕಡಿಮೆಮಾಡದೆ ಇದ್ದಲ್ಲಿ ಯಾವ ಮಾನವನೂ ಉಳಿಯುವಂತಿಲ್ಲ. ಆದರೆ ದೇವರು ಆರಿಸಿಕೊಂಡವರ ಪ್ರಯುಕ್ತ ಆ ದಿನಗಳನ್ನು ಕಡಿಮೆಮಾಡಲಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆ ದಿನಗಳನ್ನು ಕಡಿಮೆ ಮಾಡದಿದ್ದರೆ, ಒಬ್ಬನೂ ಉಳಿಯುವಂತಿಲ್ಲ. ಆದರೆ ಆಯ್ಕೆಯಾದವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಲಾಗುವುದು.