Matthew 24:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“‘ಕ್ರಿಸ್ತನು ಅಡವಿಯಲ್ಲಿದ್ದಾನೆ!’ ಎಂದು ಕೆಲವರು ಹೇಳಿದರೆ ಅಡವಿಗೆ ಹೋಗಬೇಡಿ. ‘ಕ್ರಿಸ್ತನು ಆ ಕೋಣೆ ಒಳಗೆ ಇದ್ದಾನೆ!’ ಎಂದು ಹೇಳಿದರೆ ಅದನ್ನು ನಂಬಬೇಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ ಯಾರಾದರು ನಿಮಗೆ, ‘ಅಗೋ ಕ್ರಿಸ್ತನು ಅಡವಿಯಲ್ಲಿ ಇದ್ದಾನೆಂದು’ ಹೇಳಿದರೆ ಅಡವಿಗೆ ಹೊರಟುಹೋಗಬೇಡಿರಿ; ‘ಇಗೋ ಒಳಕೋಣೆಗಳಲ್ಲಿದ್ದಾನೆಂದು’ ಹೇಳಿದರೆ ನಂಬಬೇಡಿರಿ.
Kannada BSI Bible 2016
ಆದಕಾರಣ ಅವರು ನಿಮಗೆ--ಇಗೋ, ಆತನು ಅಡವಿಯಲ್ಲಿದ್ದಾನೆಂದು ಹೇಳಿದರೆ ಹೋಗಬೇಡಿರಿ; ಇಗೋ, ಆತನು ಗುಪ್ತವಾದ ಕೋಣೆಗಳಲ್ಲಿದ್ದಾನೆಂದು ಹೇಳಿದರೆ ಅದನ್ನು ನಂಬ ಬೇಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ಯಾರಾದರೂ ನಿಮಗೆ - ಅಗೋ ಕ್ರಿಸ್ತನು ಅಡವಿಯಲ್ಲಿ ಇದ್ದಾನೆಂದು ಹೇಳಿದರೆ ಹೊರಟುಹೋಗಬೇಡಿರಿ; ಇಗೋ ಕೋಣೆಗಳಲ್ಲಿದ್ದಾನೆಂದು ಹೇಳಿದರೆ ನಂಬಬೇಡಿರಿ.
Kannada Bible (KNCL) BSI 2016
ಆದ್ದರಿಂದ ಯಾರಾದರು, ‘ಅಗೋ ಕ್ರಿಸ್ತ ಅಡವಿಯಲ್ಲಿದ್ದಾನೆ,’ ಎಂದರೆ ಅಲ್ಲಿಗೆ ಹೋಗಬೇಡಿ. ‘ಇಗೋ, ಇಲ್ಲೇ ಒಳಗೆ ಅವಿತುಕೊಂಡಿದ್ದಾನೆ,’ ಎಂದರೂ ಅದನ್ನು ನಂಬಬೇಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅವರು ನಿಮಗೆ, ‘ನೋಡಿ, ಆತನು ಅರಣ್ಯದಲ್ಲಿದ್ದಾನೆ’ ಎಂದು ಹೇಳಿದರೆ ಹೋಗಬೇಡಿರಿ. ‘ನೋಡಿ, ಆತನು ಒಳ ಕೋಣೆಯಲ್ಲಿದ್ದಾನೆ,’ ಎಂದು ಹೇಳಿದರೂ ನಂಬಬೇಡಿರಿ.