Matthew 24:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮನುಷ್ಯಕುಮಾರನು ಜನರಿಗೆಲ್ಲ ಕಾಣಿಸುವಂತೆ ಬರುತ್ತಾನೆ. ಮನುಷ್ಯಕುಮಾರನ ಪ್ರತ್ಯಕ್ಷತೆಯು ಆಕಾಶದಲ್ಲಿ ಮಿಂಚು ಹೊಳೆಯುವಂತೆ ಪ್ರಕಾಶಿಸುತ್ತಾ ಲೋಕದ ಎಲ್ಲಾ ಕಡೆಗಳಲ್ಲೂ ಕಾಣಿಸುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೇಗೆ ಮಿಂಚು ಪೂರ್ವದಲ್ಲಿ ಹುಟ್ಟಿ ಪಶ್ಚಿಮದ ವರೆಗೂ ಹೊಳೆಯುತ್ತದೋ ಹಾಗೆಯೇ ಮನುಷ್ಯಕುಮಾರನ ಬರುವಿಕೆಯೂ ಆಗುವುದು.
Kannada BSI Bible 2016
ಯಾಕಂದರೆ ಮಿಂಚು ಪೂರ್ವದಿಂದ ಹೊರಟು ಬಂದು ಪಶ್ಚಿಮದವರೆಗೆ ಹೊಳೆಯು ವಂತೆಯೇ ಮನುಷ್ಯಕುಮಾರನ ಬರೋಣವೂ ಇರು ವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೇಗೆ ವಿುಂಚು ಮೂಡಣದಲ್ಲಿ ಹುಟ್ಟಿ ಪಡುವಣದವರೆಗೂ ಕಾಣಿಸುತ್ತದೋ ಹಾಗೆಯೇ ಮನುಷ್ಯಕುಮಾರನ ಪ್ರತ್ಯಕ್ಷತೆಯು ಇರುವದು.
Kannada Bible (KNCL) BSI 2016
ಏಕೆಂದರೆ ಪೂರ್ವದಿಂದ ಮಿನುಗಿ ಪಶ್ಚಿಮದವರೆಗೂ ಹೊಳೆಯುವ ಮಿಂಚಿನಂತೆ ಇರುವುದು ನರಪುತ್ರನ ಆಗಮನ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಮಿಂಚು ಪೂರ್ವದಿಂದ ಮಿನುಗಿ ಪಶ್ಚಿಮದವರೆಗೆ ಹೊಳೆಯುವಂತೆಯೇ ಮನುಷ್ಯಪುತ್ರನಾದ ನನ್ನ ಬರುವಿಕೆಯೂ ಇರುವುದು.