Matthew 24:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಯೇಸು ಆಲಿವ್ ಗುಡ್ಡದ ಮೇಲೆ ಕುಳಿತುಕೊಂಡಿದ್ದಾಗ, ಶಿಷ್ಯರು ಪ್ರತ್ಯೇಕವಾಗಿ ಯೇಸುವಿನ ಬಳಿಗೆ ಬಂದು, “ಇವುಗಳೆಲ್ಲಾ ಯಾವಾಗ ಸಂಭವಿಸುತ್ತವೆ! ನೀನು ಈ ಲೋಕಕ್ಕೆ ಮತ್ತೊಮ್ಮೆ ಬರುವಾಗ ಮತ್ತು ಲೋಕದ ಸಮಾಪ್ತಿಯ ಸಮಯ ಬಂದಾಗ ಸೂಚನೆಗಾಗಿ ಏನು ಸಂಭವಿಸುವುದು? ನಮಗೆ ತಿಳಿಸು!” ಎಂದು ಕೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಳಿಕ ಆತನು ಎಣ್ಣೆಯ ಮರಗಳ ಗುಡ್ಡದ ಮೇಲೆ ಕುಳಿತಿದ್ದಾಗ ಶಿಷ್ಯರು ಆತನ ಬಳಿಗೆ ಪ್ರತ್ಯೇಕವಾಗಿ ಬಂದು, “ಇವೆಲ್ಲವೂ ಯಾವಾಗ ಸಂಭವಿಸುವುದು? ನಿನ್ನ ಬರೋಣಕ್ಕೂ ಲೋಕದ ಸಮಾಪ್ತಿಗೂ ಸೂಚನೆಯೇನು?” ನಮಗೆ ಹೇಳು ಅನ್ನಲು
Kannada BSI Bible 2016
ಆತನು ಎಣ್ಣೇಮರಗಳ ಗುಡ್ಡದ ಮೇಲೆ ಕೂತುಕೊಂಡಾಗ ಶಿಷ್ಯರು ಪ್ರತ್ಯೇಕವಾಗಿ ಆತನ ಬಳಿಗೆ ಬಂದು--ಇವು ಯಾವಾಗ ಆಗುವವು? ಮತ್ತು ನಿನ್ನ ಬರೋಣಕ್ಕೂ ಲೋಕವು ಅಂತ್ಯವಾಗುವದಕ್ಕೂ ಸೂಚನೆ ಏನು? ನಮಗೆ ಹೇಳು ಎಂದು ಕೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಳಿಕ ಆತನು ಎಣ್ಣೆಯ ಮರಗಳ ಗುಡ್ಡದ ಮೇಲೆ ಕೂತಿದ್ದಾಗ ಶಿಷ್ಯರು ಆತನ ಬಳಿಗೆ ಪ್ರತ್ಯೇಕವಾಗಿ ಬಂದು - ಅದು ಯಾವಾಗ ಆಗುವದು? ನೀನು ಪ್ರತ್ಯಕ್ಷನಾಗುವದಕ್ಕೂ ಯುಗದ ಸಮಾಪ್ತಿಗೂ ಸೂಚನೆಯೇನು? ನಮಗೆ ಹೇಳು ಅನ್ನಲು
Kannada Bible (KNCL) BSI 2016
ಬಳಿಕ ಯೇಸುಸ್ವಾಮಿ ಓಲಿವ್ ಗುಡ್ಡದ ಮೇಲೆ ಕುಳಿತರು. ಶಿಷ್ಯರು ಅವರ ಬಳಿಗೆ ಬಂದು, “ಇದೆಲ್ಲಾ ಸಂಭವಿಸುವುದು ಯಾವಾಗ? ನಿಮ್ಮ ಪುನರಾಗಮನದ ಹಾಗೂ ಕಾಲಾಂತ್ಯದ ಪೂರ್ವಸೂಚನೆ ಏನು? ನಮಗೆ ತಿಳಿಸಿ,” ಎಂದು ಪ್ರತ್ಯೇಕವಾಗಿ ಕೇಳಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಓಲಿವ್ ಗುಡ್ಡದ ಮೇಲೆ ಕುಳಿತುಕೊಂಡಾಗ, ಶಿಷ್ಯರು ಪ್ರತ್ಯೇಕವಾಗಿ ಯೇಸುವಿನ ಬಳಿಗೆ ಬಂದು, “ಈ ಸಂಗತಿಗಳು ಸಂಭವಿಸುವುದು ಯಾವಾಗ? ನಿನ್ನ ಆಗಮನದ ಹಾಗೂ ಲೋಕಾಂತ್ಯದ ಸೂಚನೆ ಏನು? ನಮಗೆ ತಿಳಿಸು,” ಎಂದು ಕೇಳಿದರು.