Matthew 24:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆಗ ಮನುಷ್ಯಕುಮಾರನ ಆಗಮನದ ಸೂಚನೆಯು ಆಕಾಶದಲ್ಲಿ ಕಾಣಿಸಿಕೊಳ್ಳುವುದು. ಲೋಕದ ಜನರೆಲ್ಲಾ ಗೋಳಾಡುವರು. ಆಕಾಶದಲ್ಲಿ ಮೇಘಗಳ ಮೇಲೆ ಆತನು ಬರುವುದನ್ನು ಜನರೆಲ್ಲರೂ ನೋಡುವರು. ಆತನು ಶಕ್ತಿಸಾಮರ್ಥ್ಯದಿಂದಲೂ ಮಹಿಮೆಯಿಂದಲೂ ಬರುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಮನುಷ್ಯಕುಮಾರನನ್ನು ಸೂಚಿಸುವ ಗುರುತು ಆಕಾಶದಲ್ಲಿ ಕಾಣಬರುವವು. ಆಗ ಭೂಲೋಕದಲ್ಲಿರುವ ಎಲ್ಲಾ ಕುಲದವರು ಎದೆಬಡಕೊಳ್ಳುವರು, ಮತ್ತು ಮನುಷ್ಯಕುಮಾರನು ಬಲದಿಂದಲೂ, ಬಹು ಮಹಿಮೆಯಿಂದಲೂ ಆಕಾಶದ ಮೇಘಗಳ ಮೇಲೆ ಬರುವುದನ್ನು ಕಾಣುವರು.
Kannada BSI Bible 2016
ಆಗ ಮನುಷ್ಯಕುಮಾರನ ಸೂಚನೆಯು ಆಕಾಶದಲ್ಲಿ ಕಾಣುವದು; ಭೂಮಿಯ ಎಲ್ಲಾ ಗೋತ್ರದವರು ಗೋಳಾಡುವರು. ಮತ್ತು ಮನುಷ್ಯಕುಮಾರನು ಆಕಾಶದ ಮೇಘಗಳಲ್ಲಿ ಶಕ್ತಿಯೊಡನೆಯೂ ಮಹಾ ಪ್ರಭಾವದೊಂದಿಗೂ ಬರುವದನ್ನು ಅವರು ನೋಡು ವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಮನುಷ್ಯಕುಮಾರನನ್ನು ಸೂಚಿಸುವ ಗುರುತು ಆಕಾಶದಲ್ಲಿ ಕಾಣಬರುವದು. ಆಗ ಭೂಲೋಕದಲ್ಲಿರುವ ಎಲ್ಲಾ ಕುಲದವರು ಎದೆಬಡಕೊಳ್ಳುವರು, ಮತ್ತು ಮನುಷ್ಯಕುಮಾರನು ಬಲದಿಂದಲೂ ಬಹು ಮಹಿಮೆಯಿಂದಲೂ ಆಕಾಶದ ಮೇಘಗಳ ಮೇಲೆ ಬರುವದನ್ನು ಕಾಣುವರು.
Kannada Bible (KNCL) BSI 2016
ಆಗ ನರಪುತ್ರನ ಚಿಹ್ನೆ ಆಕಾಶದಲ್ಲಿ ಕಾಣಿಸಿಕೊಳ್ಳುವುದು. ಪೃಥ್ವಿಯ ಪ್ರಜೆಗಳೆಲ್ಲಾ ಅತ್ತು ಪ್ರಲಾಪಿಸುವರು. ನರಪುತ್ರನು ಶಕ್ತಿಸಾಮರ್ಥ್ಯದಿಂದಲೂ ಮಹಾಮಹಿಮೆಯಿಂದಲೂ ಮೇಘಾರೂಢನಾಗಿ ಆಗಮಿಸುವುದನ್ನು ಅವರು ಕಾಣುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆಗ ಮನುಷ್ಯಪುತ್ರನಾದ ನನ್ನ ಸೂಚನೆಯು ಆಕಾಶದಲ್ಲಿ ಕಾಣುವುದು. ಭೂಮಿಯ ಎಲ್ಲಾ ಜನಾಂಗದವರು ಗೋಳಾಡುವರು. ಮನುಷ್ಯಪುತ್ರನಾದ ನಾನು ಆಕಾಶದ ಮೇಘಗಳಲ್ಲಿ, ಶಕ್ತಿಯಿಂದಲೂ ಮಹಾಪ್ರಭಾವದಿಂದಲೂ ಬರುವುದನ್ನು ಅವರು ಕಾಣುವರು.