Matthew 24:32 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಅಂಜೂರದ ಮರವು ನಮಗೆ ಒಂದು ಪಾಠವನ್ನು ಕಲಿಸುತ್ತದೆ. ಅಂಜೂರದ ಮರದ ಕೊಂಬೆಗಳು ಹಸುರಾಗಿ ಎಳೆಯದಾಗಿದ್ದು ಹೊಸ ಎಲೆಗಳು ಬೆಳೆಯುವುದಕ್ಕೆ ಪ್ರಾರಂಭಿಸಿದಾಗ, ಬೇಸಿಗೆಯು ಹತ್ತಿರವಾಯಿತೆಂದು ನೀವು ತಿಳಿದುಕೊಳ್ಳುತ್ತೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಅಂಜೂರ ಮರದ ದೃಷ್ಟಾಂತದಿಂದ ಬುದ್ಧಿಕಲಿಯಿರಿ. ಅದರ ಕೊಂಬೆ ಇನ್ನು ಎಳೆಯದಾಗಿದ್ದು ಎಲೆ ಬಿಡುವಾಗ ಬೇಸಿಗೆಯು ಹತ್ತಿರವಾಯಿತೆಂದು ತಿಳಿದುಕೊಳ್ಳುತ್ತೀರಲ್ಲಾ.
Kannada BSI Bible 2016
ಈಗ ಅಂಜೂರ ಮರದ ಸಾಮ್ಯದಿಂದ ಕಲಿ ಯಿರಿ; ಆದರ ಕೊಂಬೆಯು ಇನ್ನೂ ಎಳೆಯದಾಗಿದ್ದು ಎಲೆಗಳನ್ನು ಬಿಡುವಾಗ ಬೇಸಿಗೆಯು ಹತ್ತಿರವಾಯಿ ತೆಂದು ನೀವು ತಿಳಿದುಕೊಳ್ಳುವಿರಿ;
Kannada BSI JV (ಕನ್ನಡ ಸತ್ಯವೇದವು J.V. (BSI))
ಅಂಜೂರದ ಮರದ ದೃಷ್ಟಾಂತದಿಂದ ಬುದ್ಧಿಕಲಿಯಿರಿ. ಅದರ ಕೊಂಬೆ ಇನ್ನೂ ಎಳೆಯದಾಗಿದ್ದು ಎಲೆ ಬಿಡುವಾಗ ಬೇಸಿಗೆಯು ಹತ್ತರವಾಯಿತೆಂದು ತಿಳುಕೊಳ್ಳುತ್ತೀರಲ್ಲಾ.
Kannada Bible (KNCL) BSI 2016
“ಅಂಜೂರದ ಮರದಿಂದ ಒಂದು ಪಾಠ ಕಲಿತುಕೊಳ್ಳಿ. ಅದರ ಎಳೆ ರೆಂಬೆಗಳಲ್ಲಿ ಎಲೆಗಳು ಚಿಗುರುವಾಗ ವಸಂತಕಾಲ ಸಮೀಪಿಸಿತು ಎಂದು ತಿಳಿದುಕೊಳ್ಳುತ್ತೀರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅಂಜೂರ ಮರದ ದೃಷ್ಟಾಂತದಿಂದ ಈ ಪಾಠವನ್ನು ಕಲಿತುಕೊಳ್ಳಿರಿ: ಅದರ ರೆಂಬೆ ಇನ್ನೂ ಎಳೆಯದಾಗಿದ್ದು ಎಲೆಗಳನ್ನು ಬಿಡುವಾಗ ಬೇಸಿಗೆಯು ಹತ್ತಿರವಾಯಿತೆಂದು ನೀವು ತಿಳಿದುಕೊಳ್ಳುತ್ತೀರಿ.