Matthew 24:38 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜಲಪ್ರಳಯಕ್ಕಿಂತ ಮುಂಚೆ ಜನರು ತಿನ್ನುತ್ತಿದ್ದರು, ಕುಡಿಯುತ್ತಿದ್ದರು, ಮದುವೆಯಾಗುತ್ತಿದ್ದರು ಮತ್ತು ತಮ್ಮ ಮಕ್ಕಳಿಗೂ ಮದುವೆ ಮಾಡಿಕೊಡುತ್ತಾ ಇದ್ದರು. ನೋಹನು ನಾವೆಯೊಳಗೆ ಹೋಗುವ ತನಕ ಜನರು ಅವುಗಳನ್ನು ಮಾಡುತ್ತಲೇ ಇದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೇಗೆಂದರೆ ಜಲಪ್ರಳಯಕ್ಕೆ ಮುಂಚಿನ ದಿನಗಳಲ್ಲಿ ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ತಿನ್ನುತ್ತಾ, ಕುಡಿಯುತ್ತಾ, ಮದುವೆಮಾಡಿಕೊಳ್ಳುತ್ತಾ, ಮದುವೆಮಾಡಿಕೊಡುತ್ತಾ ಇದ್ದರು.
Kannada BSI Bible 2016
ನೋಹನು ನಾವೆಯಲ್ಲಿ ಸೇರಿದ ದಿವಸದ ವರೆಗೆ ಪ್ರಳಯವು ಬರುವದಕ್ಕಿಂತ ಮುಂಚಿನ ಆ ದಿವಸಗಳಲ್ಲಿ ಜನರು ತಿನ್ನುತ್ತಾ ಕುಡಿಯುತ್ತಾ ಮದುವೆ ಮಾಡಿಕೊಳ್ಳುತ್ತಾ ಮದುವೆ ಮಾಡಿಕೊಡುತ್ತಾ ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೇಗಂದರೆ ಜಲಪ್ರಳಯಕ್ಕೆ ಮುಂಚಿನ ದಿನಗಳಲ್ಲಿ ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ಉಣ್ಣುತ್ತಾ ಕುಡಿಯುತ್ತಾ ಮದುವೆಮಾಡಿಕೊಳ್ಳುತ್ತಾ ಮಾಡಿಕೊಡುತ್ತಾ ಇದ್ದು
Kannada Bible (KNCL) BSI 2016
ಜಲಪ್ರಳಯಕ್ಕೆ ಹಿಂದಿನ ದಿನಗಳಲ್ಲಿ ನೋವನು ನಾವೆಯನ್ನು ಹತ್ತುವ ದಿನದವರೆಗೆ ಜನರು ತಿನ್ನುತ್ತಲೇ ಇದ್ದರು; ಕುಡಿಯುತ್ತಲೇ ಇದ್ದರು; ಮದುವೆ ಮಾಡಿಕೊಳ್ಳುವುದರಲ್ಲೂ ಮಾಡಿಕೊಡುವುದರಲ್ಲೂ ನಿರತರಾಗಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರಳಯವು ಬರುವುದಕ್ಕಿಂತ ಮುಂಚಿನ ಆ ದಿವಸಗಳಲ್ಲಿ, ನೋಹನು ನಾವೆಯಲ್ಲಿ ಸೇರಿದ ದಿವಸದವರೆಗೆ ಜನರು ತಿನ್ನುತ್ತಾ, ಕುಡಿಯುತ್ತಾ, ಮದುವೆ ಮಾಡಿಕೊಳ್ಳುತ್ತಾ, ಮದುವೆ ಮಾಡಿಕೊಡುತ್ತಾ ಇದ್ದರು.