Matthew 24:39 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಏನು ಸಂಭವಿಸುತ್ತಿದೆ ಎಂಬುದು ಅವರಿಗೆ ತಿಳಿದಿರಲಿಲ್ಲ. ಆಗ ಜಲಪ್ರಳಯವು ಬಂದು ಆ ಜನರನ್ನೆಲ್ಲಾ ನಾಶಮಾಡಿತು. “ಮನುಷ್ಯಕುಮಾರನು ಬರುವಾಗಲೂ ಅದೇ ರೀತಿಯಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರಳಯದ ನೀರು ಬಂದು ಎಲ್ಲರನ್ನು ಕೊಚ್ಚಿಕೊಂಡು ಹೋಗುವ ತನಕ ಅವರು ಏನೂ ತಿಳಿಯದೆ ಇದ್ದರಲ್ಲಾ. ಅದರಂತೆಯೇ ಮನುಷ್ಯಕುಮಾರನು ಬರುವ ಕಾಲದಲ್ಲಿಯೂ ಇರುವುದು.
Kannada BSI Bible 2016
ಪ್ರಳಯವು ಬಂದು ಅವರನ್ನು ಬಡುಕೊಂಡು ಹೊಗುವವರೆಗೂ ಅವರಿಗೆ ತಿಳಿದಿರಲಿಲ್ಲ; ಹಾಗೆಯೇ ಮನುಷ್ಯ ಕುಮಾರನ ಬರೋಣವೂ ಇರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರಳಯದ ನೀರು ಬಂದು ಎಲ್ಲರನ್ನು ಬಡುಕೊಂಡುಹೋಗುವ ತನಕ ಏನೂ ತಿಳಿಯದೆ ಇದ್ದರಲ್ಲಾ. ಅದರಂತೆ ಮನುಷ್ಯಕುಮಾರನು ಪ್ರತ್ಯಕ್ಷನಾಗುವ ಕಾಲದಲ್ಲಿಯೂ ಇರುವದು.
Kannada Bible (KNCL) BSI 2016
ಜಲಪ್ರಳಯ ಬಂದು ಅವರನ್ನು ಕೊಚ್ಚಿಕೊಂಡು ಹೋಗುವ ತನಕ ಅದರ ಅರಿವೇ ಅವರಿಗಿರಲಿಲ್ಲ. ನರಪುತ್ರನು ಆಗಮಿಸುವಾಗಲೂ ಹಾಗೆಯೇ ನಡೆಯುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜಲಪ್ರಳಯವು ಬಂದು ಅವರನ್ನು ಕೊಚ್ಚಿಕೊಂಡು ಹೋಗುವವರೆಗೂ ಅವರಿಗೆ ಅದು ತಿಳಿದಿರಲಿಲ್ಲ. ಹಾಗೆಯೇ ಮನುಷ್ಯಪುತ್ರನಾದ ನನ್ನ ಬರುವಿಕೆಯೂ ಇರುವುದು.