Matthew 24:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮ್ಮ ಸಮೀಪದಲ್ಲಿ ನಡೆಯುತ್ತಿರುವ ಯುದ್ಧಗಳ ಶಬ್ದವನ್ನೂ ಬಹು ದೂರದಲ್ಲಿ ನಡೆಯುತ್ತಿರುವ ಯುದ್ಧಗಳ ಸುದ್ದಿಯನ್ನೂ ನೀವು ಕೇಳುವಿರಿ. ಆದರೆ ಹೆದರಬೇಡಿ. ಅಂತ್ಯವು ಬರುವುದಕ್ಕಿಂತ ಮುಂಚೆ ಇವುಗಳು ಸಂಭವಿಸಲೇಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಯುದ್ಧಗಳಾಗುವುದನ್ನೂ ಯುದ್ಧಗಳಾಗುವ ಸೂಚನೆಯ ಸುದ್ದಿಗಳನ್ನೂ ನೀವು ಕೇಳಬಹುದು. ಕಳವಳಪಡದಂತೆ ನೋಡಿಕೊಳ್ಳಿರಿ; ಏಕೆಂದರೆ ಹೀಗಾಗುವುದು ಅಗತ್ಯ. ಆದರೂ ಇದು ಇನ್ನೂ ಅಂತ್ಯಕಾಲವಲ್ಲ.
Kannada BSI Bible 2016
ಯುದ್ಧಗಳನ್ನೂ ಯುದ್ಧಗಳ ಸುದ್ದಿಗಳನ್ನೂ ನೀವು ಕೇಳುವಿರಿ. ಕಳವಳಗೊಳ್ಳದಂತೆ ನೀವು ನೋಡಿಕೊಳ್ಳಿರಿ; ಯಾಕಂದರೆ ಇವೆಲ್ಲವುಗಳು ಸಂಭವಿಸುವದು ಅಗತ್ಯ; ಆದರೆ ಇದು ಇನ್ನೂ ಅಂತ್ಯವಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಯುದ್ಧಗಳಾಗುವದನ್ನೂ ಯುದ್ಧವಾಗುವ ಹಾಗಿದೆ ಎಂಬ ಸುದ್ದಿಗಳನ್ನೂ ನೀವು ಕೇಳಬೇಕಾಗಿರುವದು. ಕಳವಳಪಡದಂತೆ ನೋಡಿಕೊಳ್ಳಿರಿ; ಯಾಕಂದರೆ ಹಾಗಾಗುವದು ಅಗತ್ಯ. ಆದರೂ ಇದು ಇನ್ನೂ ಅಂತ್ಯಕಾಲವಲ್ಲ.
Kannada Bible (KNCL) BSI 2016
ಇದೂ ಅಲ್ಲದೆ, ನೀವು ರಣಕಹಳೆಗಳನ್ನೂ ಸಮರಗಳ ಸುದ್ದಿಯನ್ನೂ ಕೇಳುವಿರಿ. ಆಗ ಕಳವಳಪಡದಂತೆ ಎಚ್ಚರಿಕೆಯಿಂದಿರಿ. ಇವೆಲ್ಲವು ಸಂಭವಿಸಲೇಬೇಕು. ಆದರೆ ಇದಿನ್ನೂ ಕಾಲಾಂತ್ಯವಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯುದ್ಧಗಳನ್ನೂ ಯುದ್ಧಗಳ ಸುದ್ದಿಗಳನ್ನೂ ನೀವು ಕೇಳುವಿರಿ, ಆದರೆ ನೀವು ಕಳವಳಗೊಳ್ಳದಂತೆ ನೋಡಿಕೊಳ್ಳಿರಿ. ಏಕೆಂದರೆ ಇವೆಲ್ಲವು ಸಂಭವಿಸುವುದು ಅಗತ್ಯ. ಆದರೆ ಇದು ಇನ್ನೂ ಅಂತ್ಯವಲ್ಲ.