Matthew 24:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನಾಂಗಗಳು ಬೇರೆ ಜನಾಂಗಗಳಿಗೆ ವಿರೋಧವಾಗಿ ಯುದ್ದ ಮಾಡುತ್ತವೆ. ರಾಜ್ಯಗಳು ಬೇರೆಬೇರೆ ರಾಜ್ಯಗಳಿಗೆ ವಿರೋಧವಾಗಿ ಯುದ್ಧ ಮಾಡುತ್ತವೆ. ಬರಗಾಲಗಳು ಬರುತ್ತವೆ. ಬೇರೆಬೇರೆ ಸ್ಥಳಗಳಲ್ಲಿ ಭೂಕಂಪಗಳು ಆಗುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲಾಗಿ ಜನರಿಗೆ ವಿರುದ್ಧವಾಗಿ ಜನರು, ರಾಜ್ಯಕ್ಕೆ ವಿರುದ್ಧವಾಗಿ ರಾಜ್ಯವೂ ಏಳುವವು; ಮತ್ತು ಅಲ್ಲಲ್ಲಿ ಬರಗಳು ಬರುವವು, ಅಲ್ಲಲ್ಲಿ ಭೂಕಂಪಗಳು ಆಗುವವು;
Kannada BSI Bible 2016
ಯಾಕಂದರೆ ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಅಲ್ಲಲ್ಲಿ ಬರಗಳು, ಘೋರವ್ಯಾಧಿಗಳು ಮತ್ತು ಭೂಕಂಪಗಳು ಆಗುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜನಕ್ಕೆ ವಿರೋಧವಾಗಿ ಜನವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಮತ್ತು ಅಲ್ಲಲ್ಲಿ ಬರಗಳು ಬರುವವು, ಭೂಕಂಪಗಳು ಆಗುವವು;
Kannada Bible (KNCL) BSI 2016
ಜನಾಂಗಕ್ಕೆ ವಿರುದ್ಧ ಜನಾಂಗವೂ ರಾಷ್ಟ್ರಕ್ಕೆ ವಿರುದ್ಧ ರಾಷ್ಟ್ರವೂ ಯುದ್ಧಕ್ಕಿಳಿಯುವುವು. ಅಲ್ಲಲ್ಲಿ ಕ್ಷಾಮಡಾಮರಗಳೂ ಭೂಕಂಪಗಳೂ ಸಂಭವಿಸುವುವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು. ಅಲ್ಲಲ್ಲಿ ಬರಗಾಲಗಳು ಮತ್ತು ಭೂಕಂಪಗಳು ಸಂಭವಿಸುತ್ತವೆ.