Matthew 24:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆಗ ಜನರು ನಿಮ್ಮನ್ನು ಹಿಂಸಿಸಿ, ಮರಣದಂಡನೆ ವಿಧಿಸಲು ಅಧಿಕಾರಿಗಳಿಗೆ ಒಪ್ಪಿಸಿಕೊಡುವರು. ಜನರೆಲ್ಲರೂ ನಿಮ್ಮನ್ನು ವಿರೋಧಿಸುವರು. ನೀವು ನನ್ನಲ್ಲಿ ನಂಬಿಕೆ ಇಟ್ಟದ್ದಕ್ಕಾಗಿ ಇವುಗಳೆಲ್ಲಾ ನಿಮಗೆ ಸಂಭವಿಸುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಆಗ ನಿಮ್ಮನ್ನು ಕಷ್ಟಸಂಕಟಗಳಿಗೆ ಗುರಿಮಾಡಿ ಕೊಲ್ಲುವರು; ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲಾ ಜನಾಂಗಗಳವರು ದ್ವೇಷಿಸುವರು.
Kannada BSI Bible 2016
ಆಗ ನಿಮ್ಮನ್ನು ಸಂಕಟಪಡಿ ಸುವದಕ್ಕಾಗಿ ಒಪ್ಪಿಸುವರು; ಮತ್ತು ನಿಮ್ಮನ್ನು ಕೊಲ್ಲು ವರು. ಇದಲ್ಲದೆ ನನ್ನ ಹೆಸರಿನ ನಿಮಿತ್ತವಾಗಿ ಎಲ್ಲಾ ಜನಾಂಗಗಳವರು ನಿಮ್ಮನ್ನು ಹಗೆ ಮಾಡುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ನಿಮ್ಮನ್ನು ಉಪದ್ರವಕ್ಕೆ ಒಪ್ಪಿಸಿ ಕೊಲ್ಲುವರು; ನನ್ನ ಹೆಸರಿನ ನಿವಿುತ್ತ ನಿಮ್ಮನ್ನು ಎಲ್ಲಾ ಜನಾಂಗಗಳವರು ಹಗೆ ಮಾಡುವರು.
Kannada Bible (KNCL) BSI 2016
“ಬಳಿಕ ಜನರು ನಿಮ್ಮನ್ನು ಕಷ್ಟಸಂಕಟಗಳಿಗೆ ಗುರಿಮಾಡಿ ಕೊಲ್ಲುವರು. ನೀವು ನನ್ನವರು, ಆದುದರಿಂದಲೇ ಜನಾಂಗಗಳೆಲ್ಲ ನಿಮ್ಮನ್ನು ದ್ವೇಷಿಸುವುವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆಗ ಜನರು ನಿಮ್ಮನ್ನು ಹಿಂಸೆಪಡಿಸುವುದಕ್ಕಾಗಿ ಒಪ್ಪಿಸಿ ನಿಮ್ಮನ್ನು ಕೊಲ್ಲುವರು. ಇದಲ್ಲದೆ ನನ್ನ ಹೆಸರಿನ ನಿಮಿತ್ತವಾಗಿ ಎಲ್ಲಾ ಜನಾಂಗದವರು ನಿಮ್ಮನ್ನು ದ್ವೇಷಮಾಡುವರು.