Matthew 25:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆ ದಿನಗಳಲ್ಲಿ ಪರಲೋಕರಾಜ್ಯವು ಹೇಗಿರುತ್ತದೆ ಎನ್ನುವುದಕ್ಕೆ ಈ ಸಾಮ್ಯವು ಉದಾಹರಣೆಯಾಗಿದೆ. ಹತ್ತು ಮಂದಿ ಕನ್ನಿಕೆಯರು ತಮ್ಮ ದೀಪಗಳನ್ನು ತೆಗೆದುಕೊಂಡು ಮದುಮಗನನ್ನು ಎದುರುಗೊಳ್ಳಲು ಹೊರಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಪರಲೋಕ ರಾಜ್ಯವು ತಮ್ಮ ದೀಪಾರತಿಗಳನ್ನು ತೆಗೆದುಕೊಂಡು ಮದಲಿಂಗನನ್ನು ಸಂಧಿಸುವುದಕ್ಕೆ ಹೊರಟಂತಹ ಹತ್ತು ಮಂದಿ ಕನ್ನಿಕೆಯರಿಗೆ ಹೋಲಿಕೆಯಾಗಿದೆ.
Kannada BSI Bible 2016
ಇದಲ್ಲದೆ ಪರಲೋಕ ರಾಜ್ಯವು ತಮ್ಮ ದೀಪಗಳನ್ನು ತಕ್ಕೊಂಡು ಮದಲಿಂಗ ನನ್ನು ಎದುರುಗೊಳ್ಳುವದಕ್ಕಾಗಿ ಹೊರಟುಹೋದ ಹತ್ತುಮಂದಿ ಕನ್ಯೆಯರಿಗೆ ಹೋಲಿಕೆಯಾಗಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಪರಲೋಕರಾಜ್ಯವು ಆರತಿಗಳನ್ನು ತೆಗೆದುಕೊಂಡು ಮದಲಿಂಗನನ್ನು ಎದುರುಗೊಳ್ಳುವದಕ್ಕೆ ಹೊರಟಂಥ ಹತ್ತು ಮಂದಿ ಕನ್ಯೆಯರಿಗೆ ಹೋಲಿಕೆಯಾಗಿರುವದು.
Kannada Bible (KNCL) BSI 2016
“ಆ ದಿನಗಳಲ್ಲಿ ಸ್ವರ್ಗಸಾಮ್ರಾಜ್ಯ ಹೇಗಿರುವುದು ಎನ್ನುವುದಕ್ಕೆ ಈ ಸಾಮತಿಯನ್ನು ಕೊಡಬಹುದು: ಹತ್ತುಮಂದಿ ಕನ್ಯೆಯರು ದೀಪಾರತಿ ಹಿಡಿದು ಮದುವಣಿಗನನ್ನು ಎದುರುಗೊಳ್ಳಲು ಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಪರಲೋಕ ರಾಜ್ಯವು ತಮ್ಮ ದೀಪಗಳನ್ನು ತೆಗೆದುಕೊಂಡು ಮದುಮಗನನ್ನು ಎದುರುಗೊಳ್ಳುವುದಕ್ಕಾಗಿ ಹೊರಟುಹೋದ ಹತ್ತು ಮಂದಿ ಕನ್ಯೆಯರಿಗೆ ಹೋಲಿಕೆಯಾಗಿರುವುದು.