Matthew 25:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆದ್ದರಿಂದ ಐದು ಮಂದಿ ಬುದ್ಧಿಹೀನ ಕನ್ನಿಕೆಯರು ಎಣ್ಣೆ ಕೊಂಡುಕೊಳ್ಳುವುದಕ್ಕೆ ಹೋದರು. ಅವರು ಹೋಗುತ್ತಿರುವಾಗ, ಮದುಮಗನು ಬಂದನು. ಸಿದ್ಧವಾಗಿದ್ದ ಕನ್ನಿಕೆಯರು ಮದುಮಗನ ಜೊತೆಯಲ್ಲಿ ಔತಣಕ್ಕೆ ಹೋದರು. ನಂತರ ಬಾಗಿಲು ಮುಚ್ಚಲಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಕೊಂಡುಕೊಳ್ಳುವುದಕ್ಕೆ ಹೊರಟುಹೋದಾಗ ಮದಲಿಂಗನು ಬಂದನು. ಸಿದ್ಧವಾಗಿದ್ದವರು ಅವನ ಸಂಗಡ ಮದುವೆಯ ಮನೆಯೊಳಗೆ ಹೋದರು, ಬಾಗಿಲನ್ನು ಮುಚ್ಚಲಾಯಿತು.
Kannada BSI Bible 2016
ಅವರು ಕೊಂಡುಕೊಳ್ಳುವದಕ್ಕೆ ಹೋದಾಗ ಮದಲಿಂಗನು ಬಂದನು. ಆಗ ಸಿದ್ಧವಾಗಿ ದ್ದವರು ಮದುವೆಗೆ ಆತನೊಂದಿಗೆ ಒಳಕ್ಕೆ ಹೊದರು; ತರುವಾಯ ಬಾಗಲು ಮುಚ್ಚಲಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಕೊಂಡುಕೊಳ್ಳಲಿಕ್ಕೆ ಹೋದಾಗ ಮದಲಿಂಗನು ಬಂದನು. ಸಿದ್ಧವಾಗಿದ್ದವರು ಅವನ ಸಂಗಡ ಮದುವೆಯ ಮನೆಯೊಳಕ್ಕೆ ಹೋದರು. ಬಾಗಿಲು ಮುಚ್ಚಲಾಯಿತು.
Kannada Bible (KNCL) BSI 2016
ಅಂತೆಯೇ ಅವರು ಎಣ್ಣೆಯನ್ನು ಕೊಂಡುಕೊಳ್ಳಲು ಹೋದಾಗ ಮದುವಣಿಗನು ಬಂದೇಬಿಟ್ಟನು. ಸಿದ್ಧರಾಗಿದ್ದವರು ಅವನ ಸಂಗಡ ವಿವಾಹ ಮಹೋತ್ಸವಕ್ಕೆ ಹೋದರು. ಕಲ್ಯಾಣಮಂಟಪದ ಬಾಗಿಲುಗಳನ್ನು ಮುಚ್ಚಲಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅವರು ಕೊಂಡುಕೊಳ್ಳುವುದಕ್ಕೆ ಹೋದಾಗ, ಮದುಮಗನು ಬಂದನು. ಆಗ ಸಿದ್ಧವಾಗಿದ್ದವರು ಆತನೊಂದಿಗೆ ಮದುವೆಯ ಔತಣಕ್ಕೆ ಒಳಗೆ ಹೋದರು. ತರುವಾಯ ಬಾಗಿಲು ಮುಚ್ಚಲಾಯಿತು.