Matthew 25:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆದರೆ ಮದುಮಗನು, ‘ನಾನು ನಿಮಗೆ ಸತ್ಯವನ್ನೇ ಹೇಳುತ್ತೇನೆ. ನೀವು ಯಾರೋ ನನಗೆ ಗೊತ್ತಿಲ್ಲ’ ಎಂದು ಉತ್ತರಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಆತನು ಅವರಿಗೆ ಉತ್ತರವಾಗಿ, ‘ನಿಮ್ಮನ್ನು ನಾನರಿಯೆನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅಂದನು.
Kannada BSI Bible 2016
ಆದರೆ ಅವನು ಪ್ರತ್ಯುತ್ತರವಾಗಿ--ನಿಮ್ಮನ್ನು ಅರಿ ಯೆನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು - ನಿಮ್ಮನ್ನು ನಾನರಿಯೆನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು.
Kannada Bible (KNCL) BSI 2016
ಅದಕ್ಕೆ ಉತ್ತರವಾಗಿ ಆ ಮದುವಣಿಗ, ‘ಅದಾಗದು, ನೀವು ಯಾರೋ ನನಗೆ ಗೊತ್ತಿಲ್ಲ,’ ಎಂದುಬಿಟ್ಟ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದರೆ ಆತನು ಉತ್ತರವಾಗಿ, ‘ನಾನು ನಿಮ್ಮನ್ನು ಅರಿಯೆನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ,’ ಎಂದನು.