Matthew 25:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ಆ ಸೇವಕರ ಸಾಮರ್ಥ್ಯಕ್ಕನುಸಾರವಾಗಿ ಎಷ್ಟೆಷ್ಟು ಜವಾಬ್ದಾರಿಕೆಯನ್ನು ಕೊಡಬೇಕೆಂಬುದನ್ನು ನಿರ್ಧರಿಸಿದನು. ಅವನು ಒಬ್ಬ ಸೇವಕನಿಗೆ ಐದು ತಲಾಂತು ಮತ್ತೊಬ್ಬನಿಗೆ ಎರಡು ತಲಾಂತು ಕೊಟ್ಟನು. ಮೂರನೇ ಸೇವಕನಿಗೆ ಒಂದು ತಲಾಂತು ಕೊಟ್ಟನು. ಬಳಿಕ ಅವನು ಬೇರೆ ಸ್ಥಳಕ್ಕೆ ಹೊರಟುಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಒಬ್ಬನಿಗೆ ಐದು ತಲಾಂತು, ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು, ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ತಲಾಂತನ್ನು ವಹಿಸಿಕೊಟ್ಟು ತನ್ನ ಪ್ರಯಾಣಕ್ಕೆ ಹೋದನು.
Kannada BSI Bible 2016
ಅವನು ಒಬ್ಬನಿಗೆ ಐದು ತಲಾಂತುಗಳನ್ನು ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು, ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ಕೊಟ್ಟು ತಕ್ಷಣವೇ ಪ್ರಯಾಣ ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಒಬ್ಬನಿಗೆ ಐದು ತಲಾಂತು, ಒಬ್ಬನಿಗೆ ಎರಡು, ಒಬ್ಬನಿಗೆ ಒಂದು, ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ಕೊಟ್ಟು ಬೇರೊಂದು ದೇಶಕ್ಕೆ ಹೋದನು.
Kannada Bible (KNCL) BSI 2016
ಒಬ್ಬನಿಗೆ ಐದು ತಲೆಂತು, ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು - ಹೀಗೆ ಅವರವರ ಸಾಮರ್ಥ್ಯಕ್ಕೆ ತಕ್ಕಂತೆ ವಹಿಸಿಕೊಟ್ಟು ಹೊರಟುಹೋದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಒಬ್ಬನಿಗೆ ಐದು ಚಿನ್ನದ ನಾಣ್ಯಗಳನ್ನು, ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು; ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ಕೊಟ್ಟು ಕೂಡಲೇ ಪ್ರಯಾಣಮಾಡಿದನು.