Matthew 25:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಐದು ತಲಾಂತು ಪಡೆದ ಸೇವಕನು ಇನ್ನೂ ಐದು ತಲಾಂತನ್ನು ತನ್ನ ಯಜಮಾನನ ಬಳಿಗೆ ತಂದು, ‘ಧಣಿಯೇ, ನೀನು ನನ್ನಲ್ಲಿ ಭರವಸೆಯಿಟ್ಟು ಐದು ತಲಾಂತನ್ನು ಕೊಟ್ಟೆ. ನಾನು ಅದನ್ನು ವಿನಿಯೋಗಿಸಿ ಇನ್ನೂ ಐದು ತಲಾಂತು ಸಂಪಾದಿಸಿದ್ದೇನೆ’ ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಐದು ತಲಾಂತುಗಳು ಹೊಂದಿದವನು ಮುಂದೆ ಬಂದು ಇನ್ನೂ ಐದು ತಲಾಂತುಗಳನ್ನು ತಂದು, ‘ಯಜಮಾನನೇ, ನೀನು ಐದು ತಲಾಂತಗಳನ್ನು ನನಗೆ ಕೊಟ್ಟಿದ್ದೆಯಲ್ಲಾ, ಇಗೋ, ಇನ್ನು ಐದು ತಲಾಂತು ಸಂಪಾದಿಸಿದ್ದೇನೆ’ ಅಂದನು.
Kannada BSI Bible 2016
ಆಗ ಐದು ತಲಾಂತುಗಳನ್ನು ಹೊಂದಿದ್ದವನು ಬಂದು ಬೇರೆ ಐದು ತಲಾಂತುಗಳನ್ನು ತಂದು--ಒಡೆಯನೇ, ನೀನು ನನಗೆ ಐದು ತಲಾಂತುಗಳನ್ನು ಒಪ್ಪಿಸಿದಿ; ಇಗೋ, ಅವುಗಳಲ್ಲದೆ ಬೇರೆ ಐದು ತಲಾಂತುಗಳನ್ನು ನಾನು ಸಂಪಾದಿಸಿದ್ದೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಐದು ತಲಾಂತು ಹೊಂದಿದವನು ಮುಂದೆಬಂದು ಇನ್ನೂ ಐದು ತಲಾಂತು ತಂದು - ಸ್ವಾಮೀ, ನೀನು ಐದು ತಲಾಂತನ್ನು ನನಗೆ ಕೊಟ್ಟಿದ್ದಿಯಲ್ಲಾ, ಇಗೋ, ಇನ್ನು ಐದು ತಲಾಂತು ಸಂಪಾದಿಸಿದ್ದೇನೆ ಅಂದನು.
Kannada Bible (KNCL) BSI 2016
ಸೇವಕರಿಂದ ಲೆಕ್ಕಾಚಾರ ಕೇಳಿದ. ಐದು ತಲೆಂತು ಪಡೆದವನು ಇನ್ನೂ ಐದು ತಲೆಂತುಗಳನ್ನು ಮುಂದೆ ತಂದು, ‘ಒಡೆಯಾ, ನೀವು ನನ್ನ ವಶಕ್ಕೆ ಐದು ತಲೆಂತು ಒಪ್ಪಿಸಿದಿರಿ. ಇಗೋ ನೋಡಿ, ಮತ್ತೆ ಐದು ತಲೆಂತು ಸಂಪಾದಿಸಿದ್ದೇನೆ,’ ಎಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಐದು ಚಿನ್ನದ ನಾಣ್ಯಗಳನ್ನು ಹೊಂದಿದ್ದವನು ಬಂದು ಬೇರೆ ಐದು ಚಿನ್ನದ ನಾಣ್ಯಗಳನ್ನು ತಂದು, ‘ಒಡೆಯನೇ, ನೀನು ನನಗೆ ಐದು ಚಿನ್ನದ ನಾಣ್ಯಗಳನ್ನು ಒಪ್ಪಿಸಿದ್ದೆ. ನೋಡು, ಅವುಗಳಲ್ಲದೆ ಇನ್ನೂ ಬೇರೆ ಐದು ಚಿನ್ನದ ನಾಣ್ಯಗಳನ್ನು ನಾನು ಸಂಪಾದಿಸಿದ್ದೇನೆ,’ ಎಂದನು.