Matthew 25:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆಮೇಲೆ ಎರಡು ತಲಾಂತು ಹೊಂದಿದ್ದ ಸೇವಕನು ಯಜಮಾನನ ಬಳಿಗೆ ಬಂದು, ‘ಧಣಿಯೇ, ನೀನು ನನಗೆ ಎರಡು ತಲಾಂತು ಕೊಟ್ಟೆ. ನಾನು ಆ ಹಣವನ್ನು ಉಪಯೋಗಿಸಿ ಇನ್ನೂ ಎರಡು ತಲಾಂತು ಸಂಪಾದಿಸಿರುವೆ’ ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಎರಡು ತಲಾಂತು ಹೊಂದಿದವನು ಮುಂದೆ ಬಂದು, ‘ಯಜಮಾನನೇ, ನೀನು ಎರಡು ತಲಾಂತನ್ನು ನನಗೆ ಒಪ್ಪಿಸಿದ್ದೆಯಲ್ಲಾ; ಇಗೋ, ಇನ್ನು ಎರಡು ತಲಾಂತು ಸಂಪಾದಿಸಿದ್ದೇನೆ’ ಅಂದನು.
Kannada BSI Bible 2016
ಎರಡು ತಲಾಂತುಗಳನ್ನು ಹೊಂದಿದ್ದವನು ಸಹ ಬಂದು--ಒಡೆಯನೇ, ನೀನು ನನಗೆ ಎರಡು ತಲಾಂತುಗಳನ್ನು ಒಪ್ಪಿಸಿದಿ; ಇಗೋ, ಅವುಗಳಲ್ಲದೆ ಇನ್ನೂ ಎರಡು ತಲಾಂತುಗಳನ್ನು ನಾನು ಸಂಪಾದಿಸಿ ದ್ದೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಎರಡು ತಲಾಂತು ಹೊಂದಿದವನು ಮುಂದೆಬಂದು - ಸ್ವಾಮೀ, ಎರಡು ತಲಾಂತು ನನಗೆ ಒಪ್ಪಿಸಿದಿಯಲ್ಲಾ; ಇಗೋ, ಇನ್ನು ಎರಡು ತಲಾಂತು ಸಂಪಾದಿಸಿದ್ದೇನೆ ಅಂದನು.
Kannada Bible (KNCL) BSI 2016
ಎರಡು ತಲೆಂತು ಪಡೆದಿದ್ದವನೂ ಮುಂದೆ ಬಂದು, ‘ಒಡೆಯಾ, ನೀವು ನನ್ನ ವಶಕ್ಕೆ ಎರಡು ತಲೆಂತುಗಳನ್ನು ಒಪ್ಪಿಸಿದಿರಿ. ಇಗೋ ನೋಡಿ, ಇನ್ನೂ ಎರಡು ತಲೆಂತುಗಳನ್ನು ಸಂಪಾದಿಸಿದ್ದೇನೆ,’ ಎಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಎರಡು ಚಿನ್ನದ ನಾಣ್ಯಗಳನ್ನು ಹೊಂದಿದ್ದವನು ಸಹ ಬಂದು, ‘ಒಡೆಯನೇ, ನೀನು ನನಗೆ ಎರಡು ಚಿನ್ನದ ನಾಣ್ಯಗಳನ್ನು ಒಪ್ಪಿಸಿದ್ದೆ. ನೋಡು, ಇನ್ನೂ ಎರಡು ಚಿನ್ನದ ನಾಣ್ಯಗಳನ್ನು ನಾನು ಸಂಪಾದಿಸಿದ್ದೇನೆ,’ ಎಂದನು.