Matthew 25:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಬಳಿಕ ಒಂದು ತಲಾಂತು ಹೊಂದಿದ್ದ ಸೇವಕನು ಯಜಮಾನನ ಬಳಿಗೆ ಬಂದು, ‘ಧಣಿಯೇ, ನೀನು ಬಹಳ ಕಠಿಣ ಮನುಷ್ಯನು ಎಂದು ನಾನು ಬಲ್ಲೆ. ನೀನು ನೆಡದ ಕಡೆಯಲ್ಲಿ ರಾಶಿ ಮಾಡಿಕೊಳ್ಳುವವನು ಮತ್ತು ಬೀಜ ಬಿತ್ತದ ಕಡೆಯಲ್ಲಿ ಕೊಯ್ಯುವವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಒಂದು ತಲಾಂತು ಹೊಂದಿದವನು ಸಹ ಮುಂದೆಬಂದು, ‘ಯಜಮಾನನೇ, ನೀನು ಬಿತ್ತದಿರುವಲ್ಲಿ ಕೊಯ್ಯುವವನು, ನೀನು ತೂರದಿರುವಲ್ಲಿ ರಾಶಿಮಾಡಿಕೊಳ್ಳುವವನು ಆಗಿರುವ ಕಠಿಣ ಮನುಷ್ಯನು ಎಂದು ನಾನು ತಿಳಿದು
Kannada BSI Bible 2016
ಆಗ ಒಂದು ತಲಾಂತು ಹೊಂದಿದ್ದ ವನು ಬಂದು--ಒಡೆಯನೇ, ನೀನು ಬಿತ್ತದಿರುವಲ್ಲಿ ಕೊಯ್ಯುವವನೂ ತೂರದಿರುವಲ್ಲಿ ಕೂಡಿಸುವವನೂ ಆಗಿರುವ ಕಠಿಣ ಮನುಷ್ಯನೆಂದು ನಾನು ಬಲ್ಲೆನು;
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಒಂದೇ ತಲಾಂತು ಹೊಂದಿದವನು ಸಹ ಮುಂದೆಬಂದು - ಸ್ವಾಮೀ, ನೀನು ಕಠಿಣ ಮನುಷ್ಯನು, ನೀನು ಬಿತ್ತದಿರುವಲ್ಲಿ ಕೊಯ್ಯುವವನು, ನೀನು ತೂರದಿರುವಲ್ಲಿ ರಾಶಿಮಾಡಿಕೊಳ್ಳುವವನು ಎಂದು ತಿಳಿದು
Kannada Bible (KNCL) BSI 2016
ತರುವಾಯ ಒಂದು ತಲೆಂತು ಪಡೆದವನೂ ಮುಂದೆ ಬಂದ; ‘ಒಡೆಯಾ, ನಿಮ್ಮ ಮನಸ್ಸು ಕಠಿಣ ಎಂಬುದನ್ನು ನಾನು ಬಲ್ಲೆ. ನೀವು ಬಿತ್ತದ ಎಡೆಯಲ್ಲಿ ಕೊಯ್ಲುಮಾಡುವವರು; ನೀವು ತೂರದ ಎಡೆಯಲ್ಲಿ ರಾಶಿಮಾಡುವವರು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆಗ ಒಂದು ಚಿನ್ನದ ನಾಣ್ಯ ಹೊಂದಿದ್ದವನು ಬಂದು, ‘ಒಡೆಯನೇ, ನೀನು ಬಿತ್ತದಿರುವಲ್ಲಿ ಕೊಯ್ಯುವವನೂ ತೂರದಿರುವಲ್ಲಿ ಕೂಡಿಸುವವನೂ ಆಗಿರುವ ಕಠಿಣ ಮನುಷ್ಯನೆಂದು ನಾನು ಬಲ್ಲೆನು.