Matthew 25:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಅದಕ್ಕೆ ಯಜಮಾನನು, ‘ನೀನು ಸೋಮಾರಿಯಾದ ಕೆಟ್ಟ ಸೇವಕ! ನಾನು ನೆಡದ ಕಡೆಯಲ್ಲಿ ರಾಶಿ ಮಾಡಿಕೊಳ್ಳುವವನೆಂದು ಮತ್ತು ಬೀಜ ಬಿತ್ತದ ಕಡೆಯಲ್ಲಿ ಕೊಯ್ಯುವವನೆಂದು ನಿನಗೆ ಗೊತ್ತಿತ್ತೇ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವನ ಯಜಮಾನನು ಅವನಿಗೆ, ‘ಮೈಗಳ್ಳನಾದ ದುಷ್ಟ ಸೇವಕನೇ; ನೀನು ನನ್ನನ್ನು ಬಿತ್ತದಿರುವಲ್ಲಿ ಕೊಯ್ಯುವವನು ತೂರದಿರುವಲ್ಲಿ ರಾಶಿಮಾಡಿಕೊಳ್ಳುವವನು ಎಂದು ತಿಳಿದಿದ್ದೇಯಾ?
Kannada BSI Bible 2016
ಅದಕ್ಕೆ ಅವನ ಯಜ ಮಾನನು ಪ್ರತ್ಯುತ್ತರವಾಗಿ--ಮೈಗಳ್ಳನಾದ ಕೆಟ್ಟ ಸೇವಕನೇ, ನಾನು ಬಿತ್ತದಿರುವಲ್ಲಿ ಕೊಯ್ಯುವವನೆ ಂತಲೂ ತೂರದಿರುವಲ್ಲಿ ಕೂಡಿಸುವವನೆಂತಲೂ ನೀನು ತಿಳಿದಿದ್ದೀಯಲ್ಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅವನ ಧಣಿಯು ಅವನಿಗೆ - ಮೈಗಳ್ಳನಾದ ಕೆಟ್ಟ ಆಳು ನೀನು; ನಾನು ಬಿತ್ತದಿರುವಲ್ಲಿ ಕೊಯ್ಯುವವನು ತೂರದಿರುವಲ್ಲಿ ರಾಶಿಮಾಡಿಕೊಳ್ಳುವವನು ಎಂದು ತಿಳಿದಿಯಾ?
Kannada Bible (KNCL) BSI 2016
“ಆಗ ಧಣಿ ಅವನಿಗೆ, ‘ಎಲವೋ, ಮೈಗಳ್ಳನಾದ ದುಷ್ಟ ಸೇವಕ, ನಾನು ಬಿತ್ತದ ಎಡೆಯಲ್ಲಿ ಕೊಯ್ಲುಮಾಡುವವನು; ನಾನು ತೂರದ ಎಡೆಯಲ್ಲಿ ರಾಶಿಮಾಡುವವನು ಎಂದು ನಿನಗೆ ಗೊತ್ತಿತ್ತಲ್ಲವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅದಕ್ಕೆ ಅವನ ಯಜಮಾನನು ಉತ್ತರವಾಗಿ, ‘ಮೈಗಳ್ಳನಾದ ದುಷ್ಟ ಸೇವಕನೇ, ನಾನು ಬಿತ್ತದಿರುವಲ್ಲಿ ಕೊಯ್ಯುವವನೆಂತಲೂ ತೂರದಿರುವಲ್ಲಿ ಕೂಡಿಸುವವನೆಂತಲೂ ನೀನು ತಿಳಿದಿದ್ದೀಯಲ್ಲಾ.