Matthew 25:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಆ ಯಜಮಾನನು, ‘ಕೆಲಸಕ್ಕೆ ಬಾರದ ಆ ಸೇವಕನನ್ನು, ಜನರು ಗೋಳಾಡುತ್ತಾ ಬಾಧೆಯಿಂದ ತಮ್ಮ ಹಲ್ಲುಗಳನ್ನು ಕಡಿಯುತ್ತಿರುವ ಕಗ್ಗತ್ತಲೆಯ ಸ್ಥಳಕ್ಕೆ ದಬ್ಬಿರಿ’ ಎಂದು ಆಜ್ಞಾಪಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ನಿಷ್ಪ್ರಯೋಜಕನಾದ ಈ ಸೇವಕನನ್ನು ಹೊರಗೆ ಕಗ್ಗತ್ತಲೆಗೆ ಹಾಕಿಬಿಡಿರಿ ಎಂದು ಅಪ್ಪಣೆಕೊಟ್ಟನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲುಕಡಿಯೋಣವೂ ಇರುವವು.’
Kannada BSI Bible 2016
ಮತ್ತು ನಿಷ್ಪ್ರಯೋ ಜಕನಾದ ಈ ಸೇವಕನನ್ನು ನೀವು ಹೊರಗೆ ಕತ್ತಲೆಯಲ್ಲಿ ಹಾಕಿರಿ; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಕೆಲಸಕ್ಕೆ ಬಾರದ ಈ ಆಳನ್ನು ಹೊರಗೆ ಕತ್ತಲೆಗೆ ಹಾಕಿಬಿಡಿರಿ ಎಂದು ಹೇಳಿದನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.
Kannada Bible (KNCL) BSI 2016
ಅಪ್ರಯೋಜಕನಾದ ಈ ಸೇವಕನನ್ನು ಹೊರಗಿನ ಕಗ್ಗತ್ತಲೆಗೆ ದಬ್ಬಿರಿ. ಅಲ್ಲಿ ಕಟಕಟನೆ ಹಲ್ಲುಕಡಿದುಕೊಂಡು ಗೋಳಾಡಬೇಕಾಗುವುದು,’ ಎಂದು ಹೇಳಿದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಷ್ಪ್ರಯೋಜಕನಾದ ಆ ಸೇವಕನನ್ನು ನೀವು ಹೊರಗೆ ಕತ್ತಲೆಯಲ್ಲಿ ಹಾಕಿರಿ. ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು,’ ಎಂದನು.