Matthew 25:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಸಮಸ್ತ ದೇವದೂತರ ಸಮೇತ ಮತ್ತೆ ಬರುವಾಗ ರಾಜನಾಗಿ ಮಹಾಸಿಂಹಾಸನದ ಮೇಲೆ ಕುಳಿತುಕೊಳ್ಳುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಸಮಸ್ತ ದೇವದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಳ್ಳುವನು;
Kannada BSI Bible 2016
ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವನು;
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಎಲ್ಲಾ ದೇವದೂತರೊಂದಿಗೆ ಕೂಡಿಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕೂತುಕೊಳ್ಳುವನು;
Kannada Bible (KNCL) BSI 2016
“ನರಪುತ್ರನು ತನ್ನ ಮಹಿಮೆಯಲ್ಲಿ ಸಮಸ್ತ ದೇವದೂತರ ಸಮೇತ ಬರುವಾಗ ತನ್ನ ಮಹಿಮಾನ್ವಿತ ಸಿಂಹಾಸನದಲ್ಲಿ ಆಸೀನನಾಗಿರುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಮನುಷ್ಯಪುತ್ರನಾದ ನಾನು ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ, ನನ್ನ ಮಹಿಮೆಯ ಸಿಂಹಾಸನದ ಮೇಲೆ ಕುಳಿತುಕೊಳ್ಳುವೆನು.