Matthew 25:36 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಬಟ್ಟೆಯಿಲ್ಲದವನಾಗಿದ್ದೆನು. ನೀವು ನನಗೆ ಉಡುವುದಕ್ಕೆ ಕೊಟ್ಟಿರಿ. ನಾನು ಕಾಯಿಲೆಯಲ್ಲಿ ಬಿದ್ದಿದ್ದೆನು, ನೀವು ನನಗೆ ಆರೈಕೆ ಮಾಡಿದಿರಿ. ನಾನು ಸೆರೆಯಲ್ಲಿದ್ದೆನು, ನೀವು ನನ್ನನ್ನು ನೋಡುವುದಕ್ಕೆ ಬಂದಿರಿ’ ಎಂದು ಹೇಳುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಟ್ಟೆಯಿಲ್ಲದವನಾಗಿದ್ದೆನು, ನನಗೆ ಉಡುವುದಕ್ಕೆ ಕೊಟ್ಟಿರಿ; ಅಸ್ವಸ್ಥನಾಗಿದ್ದಾಗ, ನನ್ನನ್ನು ಆರೈಕೆ ಮಾಡಿದಿರಿ; ಸೆರೆಮನೆಯಲ್ಲಿದ್ದೆನು, ನನ್ನನ್ನು ನೋಡುವುದಕ್ಕೆ ಬಂದಿರಿ’ ಎಂದು ಹೇಳುವನು.
Kannada BSI Bible 2016
ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡಿಸಿ ದಿರಿ; ನಾನು ಅಸ್ವಸ್ಥನಾಗಿದ್ದೆನು; ನೀವು ನನ್ನನ್ನು ಸಂಧಿಸಿ ದಿರಿ; ನಾನು ಸೆರೆಯಲ್ಲಿದ್ದೆನು, ನೀವು ನನ್ನ ಬಳಿಗೆ ಬಂದಿರಿ ಎಂದು ಹೇಳುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಟ್ಟೆಯಿಲ್ಲದವನಾಗಿದ್ದೆನು, ನನಗೆ ಉಡುವದಕ್ಕೆ ಕೊಟ್ಟಿರಿ; ರೋಗದಲ್ಲಿ ಬಿದ್ದಿದ್ದೆನು, ನನ್ನನ್ನು ಆರೈಕೆ ಮಾಡುವದಕ್ಕೆ ಬಂದಿರಿ; ಸೆರೆಮನೆಯಲ್ಲಿದ್ದೆನು, ನನ್ನನ್ನು ನೋಡುವದಕ್ಕೆ ಬಂದಿರಿ ಎಂದು ಹೇಳುವನು.
Kannada Bible (KNCL) BSI 2016
ಬಟ್ಟೆಬರೆಯಿಲ್ಲದೆ ಇದ್ದೆ, ನನಗೆ ಉಡಲು ಕೊಟ್ಟಿರಿ. ರೋಗದಿಂದಿದ್ದೆ, ನನ್ನನ್ನು ಆರೈಕೆಮಾಡಿದಿರಿ. ಬಂಧಿಯಾಗಿದ್ದೆ, ನೀವು ನನ್ನನ್ನು ಸಂಧಿಸಿದಿರಿ,’ ಎಂದು ಹೇಳುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡಿಸಿದಿರಿ. ನಾನು ಅಸ್ವಸ್ಥನಾಗಿದ್ದೆನು, ನೀವು ನನ್ನನ್ನು ಉಪಚರಿಸಿದಿರಿ. ನಾನು ಸೆರೆಯಲ್ಲಿದ್ದೆನು, ನೀವು ನನ್ನ ಬಳಿಗೆ ಬಂದಿರಿ,’ ಎಂದು ಹೇಳುವೆನು.