Matthew 25:37 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆಗ ಒಳ್ಳೆಯ ಜನರು, ‘ಪ್ರಭುವೇ, ನೀನು ಹಸಿದಿದ್ದನ್ನು ನೋಡಿ ಯಾವಾಗ ನಿನಗೆ ಆಹಾರ ಕೊಟ್ಟೆವು? ನೀನು ಬಾಯಾರಿದ್ದನ್ನು ನೋಡಿ ಯಾವಾಗ ಕುಡಿಯುವುದಕ್ಕೆ ಕೊಟ್ಟೆವು?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಉತ್ತರವಾಗಿ ನೀತಿವಂತರು, ‘ಕರ್ತನೇ, ಯಾವಾಗ ನೀನು ಹಸಿದಿದ್ದನ್ನು ಕಂಡು ನಿನಗೆ ಊಟ ಕೊಟ್ಟೆವು? ಇಲ್ಲವೆ ನೀನು ಬಾಯಾರಿದ್ದನ್ನು ಕಂಡು ಕುಡಿಯುವುದಕ್ಕೆ ಕೊಟ್ಟೆವು?
Kannada BSI Bible 2016
ಆಗ ಆ ನೀತಿವಂತರು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ಯಾವಾಗ ನೀನು ಹಸಿದದ್ದನ್ನು ನೋಡಿ ನಾವು ನಿನಗೆ ಉಣಿಸಿ ದೆವು? ಇಲ್ಲವೆ ಬಾಯಾರಿದ್ದಾಗ ನಿನಗೆ ಕುಡಿಯುವದಕ್ಕೆ ಕೊಟ್ಟೆವು? ಯಾವಾಗ
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ನೀತಿವಂತರು - ಸ್ವಾಮೀ, ಯಾವಾಗ ನೀನು ಹಸಿದದ್ದನ್ನು ಕಂಡು ನಿನಗೆ ಊಟಕ್ಕೆ ಕೊಟ್ಟೆವು? ಇಲ್ಲವೆ ನೀನು ಬಾಯಾರಿದ್ದನ್ನು ಕಂಡು ಕುಡಿಯುವದಕ್ಕೆ ಕೊಟ್ಟೆವು?
Kannada Bible (KNCL) BSI 2016
ಅದಕ್ಕೆ ಆ ಸಜ್ಜನರು, ‘ಸ್ವಾಮೀ, ತಾವು ಯಾವಾಗ ಹಸಿದಿದ್ದನ್ನು ಕಂಡು ನಾವು ಆಹಾರ ಕೊಟ್ಟೆವು? ಬಾಯಾರಿದ್ದನ್ನು ಕಂಡು ಕುಡಿಯಲು ಕೊಟ್ಟೆವು?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆಗ ಆ ನೀತಿವಂತರು ಉತ್ತರವಾಗಿ ನನಗೆ, ‘ಕರ್ತನೇ, ನೀನು ಯಾವಾಗ ಹಸಿದದ್ದನ್ನು ನೋಡಿ ನಾವು ನಿನಗೆ ಉಣಿಸಿದೆವು? ಇಲ್ಲವೆ ಬಾಯಾರಿದ್ದಾಗ ನಿನಗೆ ಕುಡಿಯುವುದಕ್ಕೆ ಕೊಟ್ಟೆವು?