Matthew 25:38 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ಒಬ್ಬಂಟಿಗನಾಗಿ ಮನೆಯಿಂದ ದೂರವಾಗಿ ಇದ್ದದ್ದನ್ನು ನೋಡಿ ಯಾವಾಗ ನಿನ್ನನ್ನು ನಮ್ಮ ಮನೆಗಳೊಳಗೆ ಸೇರಿಸಿಕೊಂಡೆವು? ನಿನಗೆ ಬಟ್ಟೆಯಿಲ್ಲದಿರುವುದನ್ನು ನೋಡಿ ಯಾವಾಗ ಉಡುವುದಕ್ಕೆ ಕೊಟ್ಟೆವು?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾವಾಗ ನೀನು ಪರದೇಶಿಯಾಗಿರುವುದನ್ನು ಕಂಡು ಆಶ್ರಯ ನೀಡಿದೆವು? ಇಲ್ಲವೆ ನಿನಗೆ ಬಟ್ಟೆಯಿಲ್ಲದ್ದನ್ನು ಕಂಡು ಉಡುವುದಕ್ಕೆ ಕೊಟ್ಟೆವು?
Kannada BSI Bible 2016
ನೀನು ಪರದೇಶಿಯಾ ಗಿರುವದನ್ನು ನಾವು ನೋಡಿ ನಿನ್ನನ್ನು ಒಳಕ್ಕೆ ಸೇರಿಸಿ ಕೊಂಡೆವು? ಇಲ್ಲವೆ ಬಟ್ಟೆಯಿಲ್ಲದಿರುವಾಗ ನಿನಗೆ ಉಡಿಸಿದೆವು?
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವಾಗ ನೀನು ಪರದೇಶಿಯಾಗಿರುವದನ್ನು ಕಂಡು ಸೇರಿಸಿಕೊಂಡೆವು? ಇಲ್ಲವೆ ನಿನಗೆ ಬಟ್ಟೆಯಿಲ್ಲದ್ದನ್ನು ಕಂಡು ಉಡುವದಕ್ಕೆ ಕೊಟ್ಟೆವು?
Kannada Bible (KNCL) BSI 2016
ಯಾವಾಗ ತಾವು ಅಪರಿಚಿತರಾಗಿದ್ದನ್ನು ಕಂಡು ನಾವು ಆಶ್ರಯಕೊಟ್ಟೆವು? ಬಟ್ಟೆಬರೆಯಿಲ್ಲದ್ದನ್ನು ಕಂಡು ಉಡಲು ಕೊಟ್ಟೆವು?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ಪರದೇಶಿಯಾಗಿರುವುದನ್ನು ನಾವು ಯಾವಾಗ ಕಂಡು ನಿನಗೆ ಆಶ್ರಯ ಕೊಟ್ಟೆವು? ಇಲ್ಲವೆ ಬಟ್ಟೆಯಿಲ್ಲದಿರುವಾಗ ನಿನಗೆ ಉಡಿಸಿದೆವು?