Matthew 25:43 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಪರದೇಶಿಯಾಗಿದ್ದೆನು, ನೀವು ನನ್ನನ್ನು ನಿಮ್ಮ ಮನೆಯೊಳಕ್ಕೆ ಸೇರಿಸಿಕೊಳ್ಳಲಿಲ್ಲ. ನಾನು ಬಟ್ಟೆಯಿಲ್ಲದವನಾಗಿದ್ದೆನು. ನೀವು ನನಗೆ ಉಡುವುದಕ್ಕೆ ಕೊಡಲಿಲ್ಲ. ನಾನು ಕಾಯಿಲೆಯಲ್ಲಿ ಬಿದ್ದಿದ್ದೆನು ಮತ್ತು ಸೆರೆಯಲ್ಲಿದ್ದೆನು, ನೀವು ನನ್ನನ್ನು ನೋಡಿಕೊಳ್ಳಲಿಲ್ಲ’ ಎಂದು ಹೇಳುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪರದೇಶಿಯಾಗಿದ್ದೆನು, ನೀವು ನನಗೆ ಆಶ್ರಯ ಕೊಡಲಿಲ್ಲ; ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡುವುದಕ್ಕೆ ಕೊಡಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಆರೈಕೆಮಾಡುವುದಕ್ಕೆ ಬರಲಿಲ್ಲವೆಂದು’ ಹೇಳುವನು.
Kannada BSI Bible 2016
ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಗೆ ಸೇರಿಸಿಕೊಳ್ಳಲಿಲ್ಲ; ಬಟ್ಟೆಯಿಲ್ಲದವನಾಗಿದ್ದಾಗ ನೀವು ನನಗೆ ಉಡಿಸಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಸಂಧಿಸಲಿಲ್ಲ ಎಂದು ಹೇಳುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪರದೇಶಿಯಾಗಿದ್ದೆನು, ನೀವು ನನ್ನನ್ನು ಸೇರಿಸಿಕೊಳ್ಳಲಿಲ್ಲ; ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡುವದಕ್ಕೆ ಕೊಡಲಿಲ್ಲ; ರೋಗದಲ್ಲಿ ಬಿದ್ದಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಆರೈಕೆಮಾಡುವದಕ್ಕೆ ಬರಲಿಲ್ಲವೆಂದು ಹೇಳುವನು.
Kannada Bible (KNCL) BSI 2016
ಬಟ್ಟೆಬರೆಯಿಲ್ಲದೆ ಇದ್ದೆ, ನನಗೆ ಉಡಲು ಕೊಡಲಿಲ್ಲ; ರೋಗಿಯಾಗಿದ್ದೆ, ಬಂಧಿಯಾಗಿದ್ದೆ, ನೀವು ನನ್ನನ್ನು ಸಂಧಿಸಲಿಲ್ಲ,’ ಎಂದು ಹೇಳುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಪರದೇಶಿಯಾಗಿದ್ದೆನು, ನೀವು ನನ್ನನ್ನು ಒಳಕ್ಕೆ ಸೇರಿಸಿಕೊಳ್ಳಲಿಲ್ಲ. ಬಟ್ಟೆಯಿಲ್ಲದವನಾಗಿದ್ದಾಗ ನೀವು ನನಗೆ ಉಡಿಸಲಿಲ್ಲ. ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಸಂದರ್ಶಿಸಲಿಲ್ಲ,’ ಎಂದು ಹೇಳುವೆನು.