Matthew 25:44 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಅವರು, ‘ಪ್ರಭುವೇ, ನೀನು ಯಾವಾಗ ಹಸಿದಿದ್ದೆ ಮತ್ತು ಬಾಯಾರಿದ್ದೆ? ನೀನು ಯಾವಾಗ ಆಶ್ರಯವಿಲ್ಲದವನಾಗಿದ್ದೆ? ನಿನಗೆ ಯಾವಾಗ ಬಟ್ಟೆಯಿರಲಿಲ್ಲ? ನೀನು ಯಾವಾಗ ಕಾಯಿಲೆ ಬಿದ್ದಿದ್ದೆ ಮತ್ತು ಸೆರೆವಾಸದಲ್ಲಿದ್ದೆ? ಇವೆಲ್ಲವನ್ನು ನಾವು ನೋಡಿಯೂ ನಿನಗೆ ಸಹಾಯ ಮಾಡದೆ ಹೋದದ್ದು ಯಾವಾಗ? ಎಂದು ಉತ್ತರಿಸುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಉತ್ತರವಾಗಿ ಅವರೂ ಸಹ, ‘ಕರ್ತನೇ, ಯಾವಾಗ ನೀನು ಹಸಿದಿದ್ದನ್ನೂ, ನೀನು ಬಾಯಾರಿದ್ದನ್ನೂ, ನೀನು ಪರದೇಶಿಯಾಗಿದ್ದನ್ನೂ, ಬಟ್ಟೆಯಿಲ್ಲದವನಾಗಿದ್ದನ್ನೂ, ಅಸ್ವಸ್ಥನಾಗಿದ್ದುದನ್ನೂ, ಸೆರೆಮನೆಯಲ್ಲಿದ್ದುದನ್ನೂ ಕಂಡು ನಿನಗೆ ಉಪಚಾರಮಾಡದೆ ಹೋದೆವು?’ ಅನ್ನುವರು.
Kannada BSI Bible 2016
ಆಗ ಅವರು ಸಹ ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನೀನು ಯಾವಾಗ ಹಸಿದದ್ದನ್ನೂ ಬಾಯರಿದ್ದನ್ನೂ ಪರದೇಶಿ ಯಾದದ್ದನ್ನೂ ಬಟ್ಟೆಯಿಲ್ಲದವನಾಗಿದ್ದದ್ದನ್ನೂ ಅಸ್ವಸ್ಥ ನಾಗಿದ್ದದ್ದನ್ನೂ ಸೆರೆಯಲ್ಲಿದ್ದದ್ದನ್ನೂ ನಾವು ನೋಡಿ ನಿನಗೆ ಉಪಚಾರ ಮಾಡಲಿಲ್ಲ ಎಂದು ಹೇಳುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಅವರು ಸಹ - ಸ್ವಾಮೀ, ಯಾವಾಗ ನೀನು ಹಸಿದದ್ದನ್ನೂ ನೀನು ಬಾಯಾರಿದ್ದನ್ನೂ ನೀನು ಪರದೇಶಿಯಾದದ್ದನ್ನೂ ಬಟ್ಟೆಯಿಲ್ಲದವನಾಗಿದ್ದದ್ದನ್ನೂ ರೋಗದಲ್ಲಿ ಬಿದ್ದದ್ದನ್ನೂ ಸೆರೆಮನೆಯಲ್ಲಿದ್ದದ್ದನ್ನೂ ಕಂಡು ನಿನಗೆ ಉಪಚಾರಮಾಡದೆ ಹೋದೆವು? ಅನ್ನುವರು.
Kannada Bible (KNCL) BSI 2016
ಅದಕ್ಕೆ ಅವರು ಕೂಡ, ‘ಸ್ವಾಮೀ, ತಾವು ಯಾವಾಗ ಹಸಿದಿದ್ದಿರಿ, ಬಾಯಾರಿದ್ದಿರಿ, ಅಪರಿಚಿತರಾಗಿದ್ದಿರಿ, ಯಾವಾಗ ಬಟ್ಟೆಬರೆ ಇಲ್ಲದೆ ಇದ್ದಿರಿ, ರೋಗಿಯಾಗಿದ್ದಿರಿ, ಮತ್ತು ಬಂಧಿಯಾಗಿ ಇದ್ದಿರಿ ಮತ್ತು ನಾವು ಅವನ್ನು ಕಂಡು ನಿಮಗೆ ಉಪಚಾರಮಾಡದೆಹೋದೆವು? ಎಂದು ಪ್ರಶ್ನಿಸುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆಗ ಅವರು ಸಹ ಉತ್ತರವಾಗಿ ನನಗೆ, ‘ಕರ್ತನೇ, ನೀನು ಹಸಿದಿದ್ದನ್ನೂ ಬಾಯಾರಿದ್ದನ್ನೂ ಪರದೇಶಿಯಾದದ್ದನ್ನೂ ಬಟ್ಟೆಯಿಲ್ಲದವನಾಗಿದ್ದದ್ದನ್ನೂ ಅಸ್ವಸ್ಥನಾಗಿದ್ದದ್ದನ್ನೂ ಸೆರೆಯಲ್ಲಿದ್ದದ್ದನ್ನೂ ನಾವು ಯಾವಾಗ ನೋಡಿ ನಿನಗೆ ಉಪಚಾರಮಾಡಲಿಲ್ಲ?’ ಎಂದು ಕೇಳುವರು.