Matthew 25:45 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆಗ ರಾಜನು, ‘ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಇಲ್ಲಿ ನನ್ನ ಜನರಿಗೆ ಏನೇನು ಮಾಡಲಿಲ್ಲವೋ ಅದನ್ನು ನನಗೂ ಮಾಡದಂತಾಯಿತು’ ಎಂದು ಉತ್ತರಕೊಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಆತನು ಉತ್ತರವಾಗಿ ಅವರಿಗೆ, ‘ನೀವು ಈ ಕೇವಲ ಅಲ್ಪರಾದವರಲ್ಲಿ ಒಬ್ಬನಿಗೆ ಏನನ್ನು ಮಾಡದೆ ಹೋದಿರೋ ಅದನ್ನು ನನಗೂ ಮಾಡದೆ ಹೋದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.
Kannada BSI Bible 2016
ಆಗ ಆತನು ಅವರಿಗೆ ಪ್ರತ್ಯುತ್ತರವಾಗಿ--ನಾನು ನಿಮಗೆ ನಿಜವಾಗಿ ಹೇಳುವದೇನಂದರೆ, ನೀವು ಇವ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡದೆ ಹೋದ ದರಿಂದ ನನಗೂ ಮಾಡಲಿಲ್ಲ ಎಂದು ಹೇಳುವನು.ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಆತನು - ನೀವು ಈ ಕೇವಲ ಅಲ್ಪವಾದವರಲ್ಲಿ ಒಬ್ಬನಿಗೆ ಏನೇನು ಮಾಡದೆ ಹೋದಿರೋ ಅದನ್ನು ನನಗೂ ಮಾಡದೆ ಹೋದಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅನ್ನುವನು.
Kannada Bible (KNCL) BSI 2016
ಅದಕ್ಕೆ ಪ್ರತ್ಯುತ್ತರವಾಗಿ ಅರಸನು, ‘ಇವರಲ್ಲಿ ಒಬ್ಬನಿಗೆ, ಅವನೆಷ್ಟೇ ಕನಿಷ್ಠನಾಗಿರಲಿ, ನೀವು ಹಾಗೆ ಮಾಡದೆಹೋದಾಗ ಅದನ್ನು ನನಗೇ ಮಾಡಲಿಲ್ಲ,’ ಎನ್ನುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆಗ ನಾನು ಅವರಿಗೆ ಉತ್ತರವಾಗಿ, ‘ನಾನು ನಿಮಗೆ ಸತ್ಯವಾಗಿ ಹೇಳುವುದೇನೆಂದರೆ, ನೀವು ಇವರಲ್ಲಿ ಅತ್ಯಲ್ಪನಾದ ಒಬ್ಬನಿಗೆ ಏನೇನು ಮಾಡಲಿಲ್ಲವೋ ಅದನ್ನು ನನಗೂ ಮಾಡಲಿಲ್ಲ,’ ಎಂದು ಹೇಳುವೆನು.