Matthew 25:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬುದ್ಧಿಹೀನ ಕನ್ನಿಕೆಯರು ಬುದ್ಧಿವಂತ ಕನ್ನಿಕೆಯರಿಗೆ, ‘ನಿಮ್ಮ ಎಣ್ಣೆಯಲ್ಲಿ ನಮಗೆ ಸ್ವಲ್ಪ ಕೊಡಿ. ನಮ್ಮ ದೀಪಾರತಿಗಳಲ್ಲಿದ್ದ ಎಣ್ಣೆಯೆಲ್ಲಾ ಮುಗಿಯಿತು’ ಎಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಬುದ್ಧಿಹೀನರಾದ ಕನ್ನಿಕೆಯರು ಬುದ್ಧಿವಂತರಾಗಿದ್ದ ಕನ್ನಿಕೆಯರಿಗೆ, ‘ನಿಮ್ಮ ಎಣ್ಣೆಯಲ್ಲಿ ನಮಗೆ ಸ್ವಲ್ಪ ಕೊಡಿರಿ.
Kannada BSI Bible 2016
ಬುದ್ಧಿಹೀನರು ಬುದ್ಧಿವಂತೆಯರಿಗೆ-- ನಿಮ್ಮ ಎಣ್ಣೆಯಲ್ಲಿ ನಮಗೆ ಕೊಡಿರಿ; ಯಾಕಂದರೆ ನಮ್ಮ ದೀಪಗಳು ಆರಿಹೋಗಿವೆ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ್ಗೆ ಬುದ್ಧಿಯಿಲ್ಲದವರು ಬುದ್ಧಿವಂತೆಯರಿಗೆ - ನಿಮ್ಮ ಎಣ್ಣೆಯಲ್ಲಿ ನಮಗೆ ಸ್ವಲ್ಪ ಕೊಡಿರಿ.
Kannada Bible (KNCL) BSI 2016
ಅವಿವೇಕಿಗಳು, ‘ನಮ್ಮ ದೀಪಗಳು ಆರಿಹೋಗುತ್ತಾ ಇವೆ; ನಿಮ್ಮ ಎಣ್ಣೆಯಲ್ಲಿ ನಮಗೂ ಕೊಂಚ ಕೊಡಿ,’ ಎಂದು ವಿವೇಕಿಗಳನ್ನು ಕೇಳಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬುದ್ಧಿಹೀನರು ಬುದ್ಧಿವಂತೆಯರಿಗೆ, ‘ನಿಮ್ಮ ಎಣ್ಣೆಯಲ್ಲಿ ನಮಗೂ ಕೊಂಚ ಕೊಡಿರಿ, ಏಕೆಂದರೆ ನಮ್ಮ ದೀಪಗಳು ಆರಿಹೋಗುತ್ತವೆ,’ ಎಂದರು.