Matthew 26:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಪ್ರಪಂಚದಾದ್ಯಂತ ಎಲ್ಲೆಲ್ಲಿ ಸುವಾರ್ತೆಯನ್ನು ತಿಳಿಸಲಾಗುವುದೋ ಅಲ್ಲೆಲ್ಲಾ ಈ ಕಾರ್ಯವನ್ನು ಈಕೆಯ ನೆನಪಿಗಾಗಿ ತಿಳಿಸಲಾಗುವುದು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲೆಲ್ಲಿ ಸಾರಲಾಗುವುದೋ ಅಲ್ಲೆಲ್ಲಾ ಈ ಸ್ತ್ರೀ ಮಾಡಿದ್ದನ್ನು ಸಹ ಈಕೆಯ ನೆನಪಿಗಾಗಿ” ಹೇಳುವರು.
Kannada BSI Bible 2016
ನಾನು ನಿಮಗೆ ನಿಜವಾಗಿ ಹೇಳುವದೇ ನಂದರೆ--ಲೋಕದಲ್ಲೆಲ್ಲಾ ಎಲ್ಲೆಲ್ಲಿ ಈ ಸುವಾರ್ತೆಯು ಸಾರಲ್ಪಡುವದೋ ಅಲ್ಲೆಲ್ಲಾ ಈ ಸ್ತ್ರೀಯು ಮಾಡಿದ್ದು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳಲ್ಪಡುವದು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲೆಲ್ಲಿ ಸಾರಲಾಗುವದೋ ಅಲ್ಲಲ್ಲಿ ಈಕೆ ಮಾಡಿದ್ದನ್ನು ಸಹ ಈಕೆಯ ನೆನಪಿಗಾಗಿ ಹೇಳುವರೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಎಂದು ಹೇಳಿದನು.
Kannada Bible (KNCL) BSI 2016
ಜಗತ್ತಿನಾದ್ಯಂತ, ಎಲ್ಲೆಲ್ಲಿ ಶುಭಸಂದೇಶ ಪ್ರಕಟವಾಗುವುದೋ ಅಲ್ಲೆಲ್ಲಾ ಈ ಸತ್ಕಾರ್ಯವನ್ನು ಈಕೆಯ ಸವಿನೆನಪಿಗಾಗಿ ಸಾರಲಾಗುವುದು. ಇದು ನಿಶ್ಚಯ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಲೋಕದಾದ್ಯಂತ ಎಲ್ಲೆಲ್ಲಿ ಸುವಾರ್ತೆಯು ಸಾರಲಾಗುವದೋ, ಅಲ್ಲೆಲ್ಲಾ ಈ ಸ್ತ್ರೀಯು ಮಾಡಿದ್ದನ್ನು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳಲಾಗುವುದು,” ಎಂದರು.