Matthew 26:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನದಂದು ಶಿಷ್ಯರು ಯೇಸುವಿನ ಬಳಿಗೆ ಬಂದು, “ನಾವು ನಿನಗಾಗಿ ಪಸ್ಕಹಬ್ಬದ ಊಟವನ್ನು ಎಲ್ಲಿ ಸಿದ್ಧಪಡಿಸಬೇಕು?” ಎಂದು ಕೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು, “ಪಸ್ಕದ ಊಟಮಾಡುವುದಕ್ಕೆ ನಾವು ನಿನಗೆ ಎಲ್ಲಿ ಸಿದ್ಧಮಾಡಬೇಕನ್ನುತ್ತೀ” ಎಂದು ಕೇಳಿದರು.
Kannada BSI Bible 2016
ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು--ಪಸ್ಕದ ಊಟಮಾಡುವದಕ್ಕೆ ನಾವು ನಿನಗಾಗಿ ಎಲ್ಲಿ ಸಿದ್ಧಮಾಡಬೇಕೆಂದು ನೀನು ಕೋರುತ್ತೀ ಎಂದು ಆತನನ್ನು ಕೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿವಸದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು - ಪಸ್ಕದ ಊಟಮಾಡುವದಕ್ಕೆ ನಾವು ನಿನಗೆ ಎಲ್ಲಿ ಸಿದ್ಧಮಾಡಬೇಕೆನ್ನುತ್ತೀ ಎಂದು ಕೇಳಲು
Kannada Bible (KNCL) BSI 2016
ಅಂದು ಹುಳಿರಹಿತ ರೊಟ್ಟಿಯ ಹಬ್ಬದ ಮೊದಲನೆಯ ದಿನ. ಶಿಷ್ಯರು ಯೇಸುಸ್ವಾಮಿಯ ಬಳಿಗೆ ಬಂದು, “ತಮಗೆ ಪಾಸ್ಕ ಭೋಜನವನ್ನು ನಾವು ಎಲ್ಲಿ ಸಿದ್ಧಪಡಿಸಬೇಕೆನ್ನುತ್ತೀರಿ?” ಎಂದು ಕೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು, “ನೀವು ಪಸ್ಕದ ಊಟ ಮಾಡಲು ನಾವು ನಿಮಗಾಗಿ ಎಲ್ಲಿ ಸಿದ್ಧಮಾಡಬೇಕೆಂದು ಬಯಸುತ್ತೀರಿ?” ಎಂದು ಕೇಳಿದರು.