Matthew 26:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದಕ್ಕೆ ಯೇಸು, “ನೀವು ನಗರಕ್ಕೆ ಹೋಗಿ ನಾನು ಸೂಚಿಸುವ ವ್ಯಕ್ತಿಯನ್ನು ಭೇಟಿಮಾಡಿ ಅವನಿಗೆ, ‘ಆರಿಸಿಕೊಂಡ ಸಮಯ ಸಮೀಪಿಸಿತು. ನಾನು ಪಸ್ಕಹಬ್ಬದ ಊಟವನ್ನು ನಿನ್ನ ಮನೆಯಲ್ಲಿ ನನ್ನ ಶಿಷ್ಯರೊಂದಿಗೆ ಮಾಡುತ್ತೇನೆ ಎಂದು ಉಪದೇಶಕನು ಹೇಳುತ್ತಾನೆ’ ಎಂಬುದಾಗಿ ತಿಳಿಸಿರಿ” ಎಂದು ಉತ್ತರಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು, “ನೀವು ಪಟ್ಟಣದೊಳಕ್ಕೆ ನಾನು ಸೂಚಿಸಿದವನ ಬಳಿಗೆ ಹೋಗಿ ಅವನಿಗೆ, ‘ನನ್ನ ಕಾಲ ಸಮೀಪವಾಯಿತು, ನಾನು ನಿನ್ನ ಮನೆಯಲ್ಲಿ ನನ್ನ ಶಿಷ್ಯರ ಸಂಗಡ ಪಸ್ಕಹಬ್ಬ ಮಾಡುತ್ತೇನೆ’ ಎಂಬುದಾಗಿ ಗುರುವು ಹೇಳುತ್ತಿದ್ದಾನೆ ಎಂದು ಹೇಳಿರಿ” ಅಂದನು.
Kannada BSI Bible 2016
ಅದಕ್ಕೆ ಆತನು--ನೀವು ಪಟ್ಟಣದೊಳಕ್ಕೆ ಇಂಥವನ ಬಳಿಗೆ ಹೋಗಿ-- ನನ್ನ ಸಮಯವು ಸವಿಾಪವಾಗಿದೆ; ನನ್ನ ಶಿಷ್ಯರ ಜೊತೆಗೆ ನಿನ್ನ ಮನೆಯಲ್ಲಿ ಪಸ್ಕವನ್ನು ಆಚರಿಸುತ್ತೇನೆಂದು ಬೋಧಕನು ಹೇಳುತ್ತಾನೆ ಎಂಬದಾಗಿ ಅವನಿಗೆ ಹೇಳಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು - ನೀವು ಪಟ್ಟಣದೊಳಕ್ಕೆ ಇಂಥವನ ಬಳಿಗೆ ಹೋಗಿ ಅವನಿಗೆ - ನನ್ನ ಕಾಲ ಸಮೀಪವಾಯಿತು, ನಿನ್ನ ಮನೆಯಲ್ಲಿ ನನ್ನ ಶಿಷ್ಯರ ಸಂಗಡ ಪಸ್ಕಹಬ್ಬಮಾಡುತ್ತೇನೆಂದು ಬೋಧಕನು ಹೇಳುತ್ತಾನೆ ಎಂಬದಾಗಿ ಹೇಳಿರಿ ಅಂದನು.
Kannada Bible (KNCL) BSI 2016
ಅದಕ್ಕೆ ಅವರು, “ಪಟ್ಟಣದಲ್ಲಿ ನಾನು ಸೂಚಿಸುವಂಥವನ ಬಳಿಗೆ ಹೋಗಿರಿ. ‘ನನ್ನ ಕಾಲ ಸಮೀಪಿಸಿತು. ಪಾಸ್ಕವನ್ನು ನನ್ನ ಶಿಷ್ಯರ ಸಮೇತ ನಿನ್ನ ಮನೆಯಲ್ಲಿಯೇ ಆಚರಿಸಬೇಕೆಂದಿದ್ದೇನೆ’; ಇದನ್ನು ನಮ್ಮ ಗುರುವೇ ಹೇಳಿಕಳುಹಿಸಿದ್ದಾರೆ ಎಂದು ಅವನಿಗೆ ತಿಳಿಸಿರಿ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಯೇಸು, “ನೀವು ಪಟ್ಟಣದೊಳಕ್ಕೆ ಇಂಥವನ ಬಳಿಗೆ ಹೋಗಿ, ‘ನನ್ನ ಸಮಯವು ಸಮೀಪವಾಗಿದೆ. ನನ್ನ ಶಿಷ್ಯರ ಜೊತೆಗೆ ನಿನ್ನ ಮನೆಯಲ್ಲಿ ಪಸ್ಕವನ್ನು ಆಚರಿಸುತ್ತೇನೆಂದು ಬೋಧಕರು ಕೇಳುತ್ತಾರೆ’ ಎಂಬುದಾಗಿ ಅವನಿಗೆ ಹೇಳಿರಿ,” ಎಂದರು.