Matthew 26:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರೆಲ್ಲರೂ ಊಟ ಮಾಡುತ್ತಿದ್ದಾಗ ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಇಲ್ಲಿರುವ ಹನ್ನೆರಡು ಮಂದಿಯಲ್ಲಿ ಒಬ್ಬನು ನನ್ನನ್ನು ವೈರಿಗಳಿಗೆ ಒಪ್ಪಿಸುತ್ತಾನೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಊಟಮಾಡುತ್ತಿರುವಾಗ ಆತನು, “ನಿಮಗೆ ಸತ್ಯವಾಗಿ ಹೇಳುತ್ತೇನೆ ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದುಕೊಡುವನು” ಅಂದನು.
Kannada BSI Bible 2016
ಅವರು ಊಟಮಾಡು ತ್ತಿದ್ದಾಗ ಆತನು--ನಾನು ನಿಮಗೆ ನಿಜವಾಗಿ ಹೇಳು ತ್ತೇನೆ, ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡುಕೊಡುವನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಊಟಮಾಡುತ್ತಿರುವಾಗ ಆತನು - ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡುಕೊಡುವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು.
Kannada Bible (KNCL) BSI 2016
ಅವರೆಲ್ಲರೂ ಊಟಮಾಡುತ್ತಿದ್ದಾಗ ಯೇಸು, “ನಿಮ್ಮಲ್ಲೇ ಒಬ್ಬನು ನನಗೆ ದ್ರೋಹಬಗೆಯುತ್ತಾನೆ, ಎಂದು ನಿಮಗೆ ಖಂಡಿತವಾಗಿ ಹೇಳುತ್ತೇನೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಊಟಮಾಡುತ್ತಿದ್ದಾಗ ಯೇಸು, “ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ನಿಮ್ಮಲ್ಲಿ ಒಬ್ಬನು ನನಗೆ ದ್ರೋಹ ಮಾಡುವನು,” ಎಂದರು.