Matthew 26:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪವಿತ್ರ ಗ್ರಂಥದಲ್ಲಿ ಬರೆದಿರುವ ಪ್ರಕಾರ ಮನುಷ್ಯಕುಮಾರನು ಹೊರಟುಹೋಗಿ ಮರಣ ಹೊಂದುತ್ತಾನೆ. ಆದರೆ ಆತನನ್ನು ಕೊಲ್ಲಲು ಒಪ್ಪಿಸುವವನಿಗೆ ಬಹಳ ಕೇಡಾಗುತ್ತದೆ. ಅವನು ಹುಟ್ಟದೆ ಇದ್ದಿದ್ದರೆ ಎಷ್ಟೋ ಚೆನ್ನಾಗಿತ್ತು!” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮನುಷ್ಯಕುಮಾರನು ಆತನ ವಿಷಯವಾಗಿ ಬರೆದಿರುವ ಹಾಗೆ ಹೊರಟುಹೋಗುತ್ತಾನೆ; ಆದರೆ ಯಾವನು ಮನುಷ್ಯಕುಮಾರನನ್ನು ಹಿಡಿದುಕೊಡುವನೋ ಅವನ ಗತಿಯನ್ನು ಏನೆಂದು ಹೇಳಲಿ. ಆ ಮನುಷ್ಯನು ಹುಟ್ಟದಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು” ಅಂದನು.
Kannada BSI Bible 2016
ಮನುಷ್ಯಕುಮಾರನು ತನ್ನ ವಿಷಯದಲ್ಲಿ ಬರೆದಿರುವ ಪ್ರಕಾರ ಹೋಗುತ್ತಾನೆ; ಆದರೆ ಮನುಷ್ಯಕುಮಾರನು ಯಾವನಿಂದ ಹಿಡಿದು ಕೊಡಲ್ಪಡುತ್ತಾನೋ ಆ ಮನುಷ್ಯನಿಗೆ ಅಯ್ಯೋ! ಆ ಮನುಷ್ಯನು ಹುಟ್ಟದೆ ಹೋಗಿದ್ದರೆ ಅವನಿಗೆ ಒಳ್ಳೇದಾಗುತ್ತಿತ್ತು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮನುಷ್ಯಕುಮಾರನು ಹೊರಟುಹೋಗುತ್ತಾನೆ ಸರಿ; ಹಾಗೆ ಆತನ ವಿಷಯವಾಗಿ ಬರೆದದೆಯಲ್ಲಾ. ಆದರೆ ಯಾವನು ಮನುಷ್ಯಕುಮಾರನನ್ನು ಹಿಡುಕೊಡುವನೋ ಅವನ ಗತಿಯನ್ನು ಏನು ಹೇಳಲಿ. ಆ ಮನುಷ್ಯನು ಹುಟ್ಟದಿದ್ದರೆ ಅವನಿಗೆ ಒಳ್ಳೇದಾಗಿತ್ತು ಅಂದನು.
Kannada Bible (KNCL) BSI 2016
ನರಪುತ್ರನೇನೋ ಪವಿತ್ರಗ್ರಂಥದಲ್ಲಿ ಬರೆದಿರುವ ಪ್ರಕಾರ ಹೊರಟುಹೋಗುತ್ತಾನೆ, ನಿಜ. ಆದರೆ ಅಯ್ಯೋ, ನರಪುತ್ರನಿಗೆ ದ್ರೋಹಬಗೆಯುವವನ ದುರ್ಗತಿಯನ್ನು ಏನೆಂದು ಹೇಳಲಿ! ಅವನು ಹುಟ್ಟದೇ ಇದ್ದಿದ್ದರೆ ಎಷ್ಟೋ ಚೆನ್ನಾಗಿತ್ತು!” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮನುಷ್ಯಪುತ್ರನಾದ ನನ್ನ ವಿಷಯದಲ್ಲಿ ಬರೆದಿರುವ ಪ್ರಕಾರ ಹೊರಟುಹೋಗುತ್ತೇನೆ. ಆದರೆ ಮನುಷ್ಯಪುತ್ರನಾದ ನನಗೆ ಯಾವನು ದ್ರೋಹಬಗೆಯುತ್ತಾನೋ ಆ ಮನುಷ್ಯನಿಗೆ ಕಷ್ಟ! ಆ ಮನುಷ್ಯನು ಹುಟ್ಟದೆ ಹೋಗಿದ್ದರೆ ಅವನಿಗೆ ಎಷ್ಟೋ ಒಳ್ಳೆಯದಾಗುತ್ತಿತ್ತು,” ಎಂದರು.