Matthew 26:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ, ಯೇಸುವನ್ನು ಆತನ ಶತ್ರುಗಳಿಗೆ ಒಪ್ಪಿಸಿಕೊಡಲಿದ್ದ ಯೂದನು, “ಗುರುವೇ, ನಿನಗೆ ವಿರೋಧವಾಗಿರುವವನು ನಾನಲ್ಲ ತಾನೇ?” ಎಂದನು. ಅದಕ್ಕೆ ಯೇಸು, “ಹೌದು, ಅವನು ನೀನೇ?” ಎಂದು ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಆತನನ್ನು ಹಿಡಿದುಕೊಡಬೇಕೆಂದಿದ್ದ ಯೂದನು, “ಗುರುವೇ, ನಾನೋ?” ಎಂದು ಕೇಳಲು ಯೇಸು ಅವನಿಗೆ, “ನೀನೇ ಹಾಗೆ ಹೇಳಿದ್ದೀ” ಎಂದು ಹೇಳಿದನು.
Kannada BSI Bible 2016
ಆಗ ಅವನನ್ನು ಹಿಡಿದುಕೊಡಬೇಕೆಂದಿದ್ದ ಯೂದನು--ಬೋಧಕನೇ, ಅವನು ನಾನೋ? ಅಂದದ್ದಕ್ಕೆ ಆತನು--ನೀನೇ ಹೇಳಿದ್ದೀ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಆತನನ್ನು ಹಿಡುಕೊಡಬೆಕೆಂದಿದ್ದ ಯೂದನು - ಗುರುವೇ, ನಾನಲ್ಲವಲ್ಲ? ಅನ್ನಲಾಗಿ ಯೇಸು ಅವನಿಗೆ - ನೀನೇ ಹೇಳಿದ್ದೀ ಎಂದು ಹೇಳಿದನು.
Kannada Bible (KNCL) BSI 2016
ಗುರುದ್ರೋಹಿಯಾದ ಯೂದನು ಆಗ, “ಗುರುವೇ, ಅವನು ನಾನಲ್ಲ ತಾನೇ?” ಎಂದನು. ಅದಕ್ಕೆ ಯೇಸು, “ಅದು ನಿನ್ನ ಬಾಯಿಂದಲೇ ಬಂದಿದೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೇಸುವನ್ನು ಹಿಡಿದುಕೊಡಬೇಕೆಂದಿದ್ದ ಯೂದನು, “ಗುರುವೇ, ಅವನು ನಾನಲ್ಲವಲ್ಲಾ?” ಎಂದನು. “ನೀನೇ ಹೇಳಿದ್ದೀ,” ಎಂದು ಯೇಸು ಉತ್ತರಕೊಟ್ಟರು.