Matthew 26:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ನನ್ನ ತಂದೆಯ ರಾಜ್ಯದಲ್ಲಿ ಮತ್ತೆ ಒಟ್ಟಾಗಿ ಸೇರಿ ದ್ರಾಕ್ಷಾರಸವನ್ನು ಹೊಸದಾಗಿ ಕುಡಿಯುವ ತನಕ ಅದನ್ನು ಇನ್ನು ಕುಡಿಯುವುದೇ ಇಲ್ಲ” ಎಂದು ಹೇಳಿ ಜನರಿಗೆ ಕುಡಿಯಲು ಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನನ್ನ ತಂದೆಯ ರಾಜ್ಯದಲ್ಲಿ ನಿಮ್ಮ ಸಂಗಡ ಹೊಸದಾಗಿ ದ್ರಾಕ್ಷಾರಸವನ್ನು ಕುಡಿಯುವ ದಿನದವರೆಗೂ ಇನ್ನು ಇದನ್ನು ಕುಡಿಯುವುದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ” ಅಂದನು.
Kannada BSI Bible 2016
ಮತ್ತು ನಾನು ನಿಮಗೆ ಹೇಳುವದೇನಂದರೆ--ಇಂದಿನಿಂದ ನನ್ನ ತಂದೆಯ ರಾಜ್ಯದಲ್ಲಿ ನಿಮ್ಮೊಂದಿಗೆ ಹೊಸದಾಗಿ ಕುಡಿಯುವ ಆ ದಿನದವರೆಗೆ ನಾನು ಈ ದ್ರಾಕ್ಷಾರಸ ವನ್ನು ಕುಡಿಯುವದೇ ಇಲ್ಲ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನನ್ನ ತಂದೆಯ ರಾಜ್ಯದಲ್ಲಿ ದ್ರಾಕ್ಷಾರಸವನ್ನು ನಿಮ್ಮ ಸಂಗಡ ಹೊಸದಾಗಿ ಕುಡಿಯುವ ದಿನದವರೆಗೂ ಇನ್ನು ಕುಡಿಯುವದೇ ಇಲ್ಲ ಎಂದು ನಿಮಗೆ ಹೇಳುತ್ತೇನೆ ಅಂದನು.
Kannada Bible (KNCL) BSI 2016
ನಾನು ನನ್ನ ಪಿತನ ಸಾಮ್ರಾಜ್ಯದಲ್ಲಿ ದ್ರಾಕ್ಷಾರಸ ನಿಮ್ಮ ಸಂಗಡ ಹೊಸದಾಗಿ ಕುಡಿಯುವ ದಿನದವರೆಗೂ ಅದನ್ನು ಇನ್ನು ಕುಡಿಯುವುದಿಲ್ಲ ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನಿಮಗೆ ಹೇಳುವುದೇನೆಂದರೆ, ಇಂದಿನಿಂದ ನನ್ನ ತಂದೆಯ ರಾಜ್ಯದಲ್ಲಿ ನಿಮ್ಮೊಂದಿಗೆ ಹೊಸದಾಗಿ ಕುಡಿಯುವ ಆ ದಿನದವರೆಗೆ ನಾನು ಈ ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲ,” ಎಂದರು.