Matthew 26:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಯೇಸು ತನ್ನ ಶಿಷ್ಯರಿಗೆ, “ಇಂದು ರಾತ್ರಿ ನೀವೆಲ್ಲರೂ ನನ್ನ ದೆಸೆಯಿಂದ ನಿಮ್ಮ ವಿಶ್ವಾಸವನ್ನು ಕಳೆದುಕೊಳ್ಳುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೇಸು, ಅವರಿಗೆ, “ಕುರುಬನನ್ನು ಹೊಡೆಯುವೆನು; ಹಿಂಡಿನ ಕುರಿಗಳು ಚದರಿಹೋಗುವವು ಎಂದು ಬರೆದಿರುವ ಹಾಗೆ ನೀವೆಲ್ಲರೂ ಈ ರಾತ್ರಿ ನನ್ನ ವಿಷಯದಲ್ಲಿ ಹಿಂಜರಿಯುವಿರಿ.”
Kannada BSI Bible 2016
ಆಮೇಲೆ ಯೇಸು ಅವರಿಗೆ--ನೀವೆಲ್ಲರೂ ಈ ರಾತ್ರಿ ನನ್ನ ವಿಷಯದಲ್ಲಿ ಅಭ್ಯಂತರಪಡುವಿರಿ; ಯಾಕಂದರೆ-- ನಾನು ಕುರುಬನನ್ನು ಹೊಡೆಯುವೆನು; ಮಂದೆ ಯ ಕುರಿಗಳು ಚದರಿಹೋಗುವವು ಎಂದು ಬರೆದದೆ;
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೇಸು, ಅವರಿಗೆ - ನೀವೆಲ್ಲರೂ ಈ ರಾತ್ರಿ ನನ್ನ ವಿಷಯದಲ್ಲಿ ದಿಗಿಲುಪಟ್ಟು ಹಿಂಜರಿಯುವಿರಿ. ಕುರುಬನನ್ನು ಹೊಡೆಯುವೆನು; ಹಿಂಡಿನ ಕುರಿಗಳು ಚದರಿಹೋಗುವವು ಎಂದು ಬರೆದದೆಯಲ್ಲಾ.
Kannada Bible (KNCL) BSI 2016
ಆಗ ಯೇಸು ತಮ್ಮ ಶಿಷ್ಯರಿಗೆ, “ ‘ಕುರಿಗಾಹಿಯನ್ನು ಕೊಲ್ಲುವೆನು ಕುರಿಗಳು ಚದರುವುವು,’ ಎಂದು ಪವಿತ್ರಗ್ರಂಥದಲ್ಲೇ ಬರೆದಿದೆ. ಅದರಂತೆಯೇ ನೀವೆಲ್ಲರೂ ಇದೇ ರಾತ್ರಿ ನನ್ನಲ್ಲಿ ವಿಶ್ವಾಸ ಕಳೆದುಕೊಂಡು ಹಿಮ್ಮೆಟ್ಟುವಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೇಸು ಅವರಿಗೆ, “ನೀವೆಲ್ಲರೂ ಈ ರಾತ್ರಿ ನನ್ನನ್ನು ಬಿಟ್ಟು ಓಡಿಹೋಗುವಿರಿ. ಪವಿತ್ರ ವೇದದಲ್ಲಿ ಹೀಗೆ ಬರೆದಿದೆ: “ ‘ಏಕೆಂದರೆ ನಾನು ಕುರುಬನನ್ನು ಹೊಡೆಯುವೆನು, ಮಂದೆಯ ಕುರಿಗಳು ಚದರಿಹೋಗುವುವು,’