Matthew 26:34 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು, “ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ಇಂದು ರಾತ್ರಿ ಕೋಳಿ ಕೂಗುವುದಕ್ಕಿಂತ ಮೊದಲು ನೀನು ನನ್ನ ವಿಷಯದಲ್ಲಿ ಆತನು ನನಗೆ ಗೊತ್ತೇ ಇಲ್ಲ ಎಂಬುದಾಗಿ ಮೂರು ಸಲ ಹೇಳುವೆ” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಪೇತ್ರನಿಗೆ, “ನಿನಗೆ ಸತ್ಯವಾಗಿ ಹೇಳುತ್ತೇನೆ, ಇದೇ ರಾತ್ರಿಯಲ್ಲಿ ಕೋಳಿ ಕೂಗುವುದಕ್ಕಿಂತ ಮೊದಲೇ ನೀನು ನನ್ನನ್ನು ಮೂರು ಸಾರಿ ನಿರಾಕರಿಸುವಿ” ಅಂದನು.
Kannada BSI Bible 2016
ಯೇಸು ಅವ ನಿಗೆ--ಈ ರಾತ್ರಿಯಲ್ಲಿ ಹುಂಜ ಕೂಗುವದಕ್ಕಿಂತ ಮುಂಚೆ ಮೂರು ಸಾರಿ ನನ್ನನ್ನು ಅಲ್ಲಗಳೆಯುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು - ನಿನಗೆ ಸತ್ಯವಾಗಿ ಹೇಳುತ್ತೇನೆ. ಇದೇ ರಾತ್ರಿಯಲ್ಲಿ ಕೋಳಿಕೂಗುವದಕ್ಕಿಂತ ಮುಂಚೆ ನೀನು ನನ್ನ ವಿಷಯದಲ್ಲಿ - ಅವನನ್ನು ಅರಿಯೆನೆಂಬದಾಗಿ ಮೂರು ಸಾರಿ ಹೇಳುವಿ ಅಂದನು.
Kannada Bible (KNCL) BSI 2016
ಅದಕ್ಕೆ ಯೇಸು, “ಇದೇ ರಾತ್ರಿ ಕೋಳಿ ಕೂಗುವ ಮೊದಲೇ ‘ಆತನನ್ನು ನಾನರಿಯೆ’ ಎಂದು ನೀನು ಮೂರು ಬಾರಿ ನನ್ನನ್ನು ನಿರಾಕರಿಸುವೆ; ಇದು ಖಂಡಿತ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವನಿಗೆ, “ಈ ರಾತ್ರಿಯಲ್ಲಿ ಹುಂಜ ಕೂಗುವುದಕ್ಕಿಂತ ಮುಂಚೆ, ನೀನು ಮೂರು ಸಾರಿ ನನ್ನನ್ನು ನಿರಾಕರಿಸುವೆ ಎಂದು ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.