Matthew 26:36 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅನಂತರ ಯೇಸು ತನ್ನ ಶಿಷ್ಯರೊಂದಿಗೆ ಗೆತ್ಸೆಮನೆ ಎಂಬ ಸ್ಥಳಕ್ಕೆ ಹೋದನು. ಯೇಸು ತನ್ನ ಶಿಷ್ಯರಿಗೆ, “ನಾನು ಅಲ್ಲಿಗೆ ಹೋಗಿ, ಪ್ರಾರ್ಥಿಸಿ ಬರುವ ತನಕ ಇಲ್ಲಿಯೇ ಇರಿ’ ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಯೇಸು ತನ್ನ ಶಿಷ್ಯರ ಸಂಗಡ ಗೆತ್ಸೇಮನೆ ಎಂಬ ತೋಟಕ್ಕೆ ಬಂದು ಅವರಿಗೆ, “ಇಲ್ಲೇ ಕುಳಿತುಕೊಳ್ಳಿರಿ, ನಾನು ಅತ್ತ ಹೋಗಿ ಪ್ರಾರ್ಥಿಸುತ್ತೇನೆ” ಎಂದು ಹೇಳಿ,
Kannada BSI Bible 2016
ತರುವಾಯ ಯೇಸು ಶಿಷ್ಯರ ಸಂಗಡ ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದು ಅವರಿಗೆ--ನಾನು ಆಚೇ ಕಡೆಗೆ ಹೋಗಿ ಪ್ರಾರ್ಥಿಸುವಾಗ ನೀವು ಇಲ್ಲೇ ಕೂತುಕೊಳ್ಳಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ಯೇಸು ತನ್ನ ಶಿಷ್ಯರ ಸಂಗಡ ಗೆತ್ಸೇಮನೆ ಎಂಬ ತೋಟಕ್ಕೆ ಬಂದು ಅವರಿಗೆ - ಇಲ್ಲೇ ಕೂತುಕೊಳ್ಳಿರಿ, ನಾನು ಅತ್ತಲಾಗಿ ಹೋಗಿ ಪ್ರಾರ್ಥನೆ ಮಾಡಿ ಬರುತ್ತೇನೆ ಎಂದು ಹೇಳಿ
Kannada Bible (KNCL) BSI 2016
ಅನಂತರ ಯೇಸುಸ್ವಾಮಿ ಅವರೊಡನೆ ಗೆತ್ಸೆಮನೆ ಎಂಬ ತೋಪಿಗೆ ಬಂದರು. ಅಲ್ಲಿ ಶಿಷ್ಯರಿಗೆ, “ನಾನು ಅತ್ತ ಹೋಗಿ ಪ್ರಾರ್ಥನೆಮಾಡಿ ಬರುವವರೆಗೂ ನೀವು ಇಲ್ಲೇ ಕುಳಿತಿರಿ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ಯೇಸು ತಮ್ಮ ಶಿಷ್ಯರ ಸಂಗಡ ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದು ಅವರಿಗೆ, “ನಾನು ಅಲ್ಲಿಗೆ ಹೋಗಿ ಪ್ರಾರ್ಥಿಸುವವರೆಗೆ ನೀವು ಇಲ್ಲೇ ಕುಳಿತುಕೊಳ್ಳಿರಿ,” ಎಂದರು.