Matthew 26:37 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸುವು ಪೇತ್ರನನ್ನು ಮತ್ತು ಜೆಬೆದಾಯನ ಇಬ್ಬರು ಮಕ್ಕಳನ್ನು ತನ್ನೊಂದಿಗೆ ಕರೆದುಕೊಂಡು ಹೋದನು. ಆಗ ಯೇಸು ಬಹಳ ದುಃಖದಿಂದ ಮನಗುಂದಿದವನಾಗಿ
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪೇತ್ರನನ್ನು ಮತ್ತು ಜೆಬೆದಾಯನ ಇಬ್ಬರು ಮಕ್ಕಳನ್ನು ಕರೆದುಕೊಂಡು ಮುಂದಕ್ಕೆ ಹೋಗಿ ದುಃಖಪಟ್ಟು ಮನಗುಂದಿದವನಾದನು.
Kannada BSI Bible 2016
ಆತನು ತನ್ನ ಜೊತೆಯಲ್ಲಿ ಪೇತ್ರನನ್ನೂ ಜೆಬೆದಾಯನ ಇಬ್ಬರು ಕುಮಾರರನ್ನೂ ಕರೆದುಕೊಂಡು ಹೋಗಿ ದುಃಖಿಸುವದಕ್ಕೂ ಬಹು ವ್ಯಥೆಪಡುವದಕ್ಕೂ ಆರಂಭಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪೇತ್ರನನ್ನೂ ಜೆಬೆದಾಯನ ಇಬ್ಬರು ಮಕ್ಕಳನ್ನೂ ಕರಕೊಂಡು ಹೋಗಿ ದುಃಖಪಟ್ಟು ಮನಗುಂದಿದವನಾದನು.
Kannada Bible (KNCL) BSI 2016
ಬಳಿಕ ಪೇತ್ರನನ್ನೂ ಜೆಬೆದಾಯನ ಇಬ್ಬರು ಕುಮಾರರನ್ನೂ ತಮ್ಮೊಂದಿಗೆ ಕರೆದುಕೊಂಡು ಮುಂದಕ್ಕೆಹೋದರು. ಅಲ್ಲಿ ಸ್ವಾಮಿ ಚಿಂತಾಕ್ರಾಂತರಾದರು, ದುಃಖಭರಿತರಾದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ತಮ್ಮ ಜೊತೆಯಲ್ಲಿ ಪೇತ್ರನನ್ನೂ ಜೆಬೆದಾಯನ ಇಬ್ಬರು ಪುತ್ರರನ್ನೂ ಕರೆದುಕೊಂಡು ಹೋಗಿ, ದುಃಖಿಸುವುದಕ್ಕೂ ಬಹು ವ್ಯಥೆಪಡುವುದಕ್ಕೂ ಆರಂಭಿಸಿದರು.