Matthew 26:38 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರಿಗೆ, “ನನ್ನ ಆತ್ಮವು ದುಃಖದಿಂದ ತುಂಬಿಹೋಗಿದೆ. ನನ್ನ ಹೃದಯವು ದುಃಖದಿಂದ ಒಡೆದುಹೋಗುವಂತಿದೆ. ನೀವು ನನ್ನೊಂದಿಗೆ ಎಚ್ಚರವಾಗಿದ್ದು ಇಲ್ಲೇ ಇರಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ಅವರಿಗೆ, “ನನ್ನ ಪ್ರಾಣವು ಸಾಯುವಷ್ಟು ದುಃಖಕ್ಕೆ ಒಳಗಾಗಿದೆ; ನೀವು ಇಲ್ಲೇ ಇದ್ದು ನನ್ನ ಸಂಗಡ ಎಚ್ಚರವಾಗಿರಿ” ಎಂದು ಹೇಳಿದನು.
Kannada BSI Bible 2016
ಆತನು ಅವರಿಗೆ--ನನ್ನ ಪ್ರಾಣವು ಮರಣಹೊಂದುವಷ್ಟು ಅತಿ ದುಃಖಕ್ಕೆ ಒಳಗಾಗಿದೆ; ನೀವು ಇಲ್ಲೇ ಇದ್ದು ನನ್ನೊಡನೆ ಎಚ್ಚರವಾಗಿರ್ರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಅವರಿಗೆ - ನನ್ನ ಪ್ರಾಣವು ಸಾಯುವಷ್ಟು ದುಃಖಕ್ಕೆ ಒಳಗಾಗಿದೆ; ನೀವು ಇಲ್ಲೇ ಇದ್ದು ನನ್ನ ಸಂಗಡ ಎಚ್ಚರವಾಗಿರ್ರಿ ಎಂದು ಹೇಳಿ
Kannada Bible (KNCL) BSI 2016
“ನನ್ನ ಮನೋವೇದನೆ ಪ್ರಾಣಹಿಂಡುವಷ್ಟು ತೀವ್ರವಾಗಿದೆ. ನೀವು ಇಲ್ಲೇ ಇದ್ದು ನನ್ನೊಡನೆ ಎಚ್ಚರವಾಗಿರಿ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವರಿಗೆ, “ನನ್ನ ಪ್ರಾಣವು ಸಾಯುವಷ್ಟು ತೀವ್ರವಾದ ದುಃಖಕ್ಕೆ ಒಳಗಾಗಿದೆ. ನೀವು ಇಲ್ಲೇ ಇದ್ದು ನನ್ನೊಡನೆ ಎಚ್ಚರವಾಗಿರಿ,” ಎಂದರು.