Matthew 26:40 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಂತರ ಯೇಸು ತನ್ನ ಶಿಷ್ಯರ ಬಳಿಗೆ ಹಿಂತಿರುಗಿದನು. ಅವರು ನಿದ್ರಿಸುತ್ತಿರುವುದನ್ನು ಕಂಡು ಆತನು ಪೇತ್ರನಿಗೆ, “ನೀವು ನನ್ನೊಂದಿಗೆ ಒಂದು ಗಂಟೆಯ ಕಾಲ ಎಚ್ಚರವಾಗಿರಲು ಸಾಧ್ಯವಿಲ್ಲವೇ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಆತನು ಶಿಷ್ಯರ ಬಳಿಗೆ ಬರಲು ಅವರು ನಿದ್ದೆಮಾಡುವುದನ್ನು ಕಂಡು ಪೇತ್ರನಿಗೆ, “ಒಂದು ಗಳಿಗೆಯಾದರೂ ನನ್ನ ಸಂಗಡ ಎಚ್ಚರವಾಗಿರಲಾರಿರಾ?
Kannada BSI Bible 2016
ಆತನು ತನ್ನ ಶಿಷ್ಯರ ಬಳಿಗೆ ಬಂದಾಗ ಅವರು ನಿದ್ರೆ ಮಾಡುವದನ್ನು ಕಂಡು ಪೇತ್ರನಿಗೆ--ಏನು ನೀವು ಒಂದು ಗಳಿಗೆಯಾದರೂ ನನ್ನೊಡನೆ ಎಚ್ಚರವಾಗಿರಲಾರಿರಾ?
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಆ ಶಿಷ್ಯರ ಬಳಿಗೆ ಬಂದು ಅವರು ನಿದ್ದೆ ಮಾಡುವದನ್ನು ಕಂಡು ಪೇತ್ರನಿಗೆ - ಹೀಗೋ? ಒಂದು ಗಳಿಗೆಯಾದರೂ ನನ್ನ ಸಂಗಡ ಎಚ್ಚರವಾಗಿರಲಾರಿರಾ?
Kannada Bible (KNCL) BSI 2016
ಅನಂತರ ಆ ಮೂವರು ಶಿಷ್ಯರ ಬಳಿಗೆ ಬಂದು, ಅವರು ನಿದ್ರಿಸುತ್ತಿರುವುದನ್ನು ಕಂಡರು. ಪೇತ್ರನನ್ನು ಉದ್ದೇಶಿಸಿ, “ಏನಿದು, ಒಂದು ಗಂಟೆಯಾದರೂ ನನ್ನೊಡನೆ ಎಚ್ಚರವಾಗಿರಲು ನಿಮ್ಮಿಂದ ಆಗದೇ ಹೋಯಿತೇ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ಯೇಸು ಬಂದು, ಶಿಷ್ಯರು ನಿದ್ರೆ ಮಾಡುವುದನ್ನು ಕಂಡು ಪೇತ್ರನಿಗೆ, “ಏನು, ನೀವು ಒಂದು ಗಳಿಗೆಯಾದರೂ ನನ್ನೊಡನೆ ಎಚ್ಚರವಾಗಿರಲಾರಿರಾ?