Matthew 26:41 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ. ಮನಸ್ಸೇನೋ ಸಿದ್ಧವಾಗಿದೆ ಆದರೆ ದೇಹಕ್ಕೆ ಬಲಸಾಲದು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ಸಿದ್ಧವಾಗಿದೆ ಆದರೆ ದೇಹವು ಬಲಹೀನವಾಗಿದೆ” ಎಂದು ಹೇಳಿದನು.
Kannada BSI Bible 2016
ನೀವು ಶೋಧನೆಗೆ ಒಳಗಾ ಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ಸಿದ್ಧವಾಗಿದೆ ನಿಜವೇ; ಆದರೆ ಶರೀರವು ಬಲಹೀನ ವಾಗಿದೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಮನಸ್ಸು ಸಿದ್ಧವಾಗಿದೆ ಸರಿ, ಆದರೆ ದೇಹಕ್ಕೆ ಬಲ ಸಾಲದು ಎಂದು ಹೇಳಿದನು.
Kannada Bible (KNCL) BSI 2016
ಪ್ರಲೋಭನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥನೆಮಾಡಿರಿ. ಆತ್ಮಕ್ಕೇನೊ ಆಸಕ್ತಿ ಇದೆ, ಆದರೆ ದೇಹಕ್ಕೆ ಶಕ್ತಿಸಾಲದು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ. ಆತ್ಮವು ಸಿದ್ಧವಾಗಿದೆ, ಆದರೆ ಶರೀರವು ಬಲಹೀನವಾಗಿದೆ,” ಎಂದು ಹೇಳಿದರು.