Matthew 26:42 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಎರಡನೆಯ ಸಾರಿ ಸ್ಪಲ್ಪದೂರ ಹೋಗಿ ಪ್ರಾರ್ಥಿಸುತ್ತಾ, “ನನ್ನ ತಂದೆಯೇ, ಸಂಕಟದ ಈ ಪಾತ್ರೆಯನ್ನು ನನ್ನಿಂದ ತೆಗೆದುಕೊಳ್ಳಲು ಸಾಧ್ಯವಿಲ್ಲದಿದ್ದರೆ ಮತ್ತು ನಾನು ಅದನ್ನು ನೆರವೇರಿಸಲೇಬೇಕಿದ್ದರೆ, ನಿನ್ನ ಇಷ್ಟದಂತೆಯೇ ಆಗಲಿ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಿರುಗಿ ಎರಡನೇ ಸಾರಿ ಹೋಗಿ, “ನನ್ನ ತಂದೆಯೇ, ನಾನು ಕುಡಿಯದ ಹೊರತು ಈ ಪಾತ್ರೆ ಬಿಟ್ಟುಹೋಗಲಾರದು ಎಂದಿದ್ದರೆ ನಿನ್ನ ಚಿತ್ತದಂತೆಯೇ ಆಗಲಿ” ಎಂದು ದೇವರನ್ನು ಪ್ರಾರ್ಥಿಸಿದನು.
Kannada BSI Bible 2016
ತಿರಿಗಿ ಆತನು ಎರಡನೆಯ ಸಾರಿ ಹೋಗಿ ಪ್ರಾರ್ಥಿಸುತ್ತಾ--ಓ ನನ್ನ ತಂದೆಯೇ, ನಾನು ಈ ಪಾತ್ರೆಯಲ್ಲಿ ಕುಡಿಯದ ಹೊರತು ಇದು ನನ್ನನ್ನು ಬಿಟ್ಟು ಹೋಗಕೂಡದಾಗಿದ್ದರೆ ನಿನ್ನ ಚಿತ್ತವೇ ಆಗಲಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತಿರಿಗಿ ಎರಡನೆಯ ಸಾರಿ ಹೋಗಿ - ನನ್ನ ತಂದೆಯೇ, ನಾನು ಕುಡಿದ ಹೊರತು ಈ ಪಾತ್ರೆ ಬಿಟ್ಟು ಹೋಗಕೂಡದಾಗಿದ್ದರೆ ನಿನ್ನ ಚಿತ್ತವೇ ಆಗಲಿ ಎಂದು ಪ್ರಾರ್ಥನೆಮಾಡಿದನು.
Kannada Bible (KNCL) BSI 2016
ಎರಡನೆಯ ಬಾರಿ ಹಿಂದಕ್ಕೆ ಹೋಗಿ ಇಂತೆಂದು ಪ್ರಾರ್ಥನೆಮಾಡಿದರು: “ನನ್ನ ಪಿತನೇ, ನಾನು ಸೇವಿಸದ ಹೊರತು ಈ ಕಷ್ಟದ ಕೊಡ ನನ್ನಿಂದ ತೊಲಗದಾದರೆ ಅದು ನಿಮ್ಮ ಚಿತ್ತದಂತೆಯೇ ಆಗಲಿ,”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಎರಡನೆಯ ಸಾರಿ ಹೋಗಿ, ಪ್ರಾರ್ಥಿಸುತ್ತಾ, “ನನ್ನ ತಂದೆಯೇ ನಾನು ಕುಡಿಯದ ಹೊರತು ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಕೂಡದಾಗಿದ್ದರೆ, ನಿನ್ನ ಚಿತ್ತವೇ ಆಗಲಿ,” ಎಂದರು.