Matthew 26:45 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಯೇಸು ತನ್ನ ಶಿಷ್ಯರ ಬಳಿಗೆ ಹಿಂದಿರುಗಿ, “ನೀವು ಇನ್ನೂ ನಿದ್ರೆ ಮಾಡುತ್ತಾ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದೀರಾ? ಪಾಪಿಷ್ಠರಾದ ಜನರಿಗೆ ಮನುಷ್ಯಕುಮಾರನನ್ನು ಒಪ್ಪಿಸುವ ಕಾಲ ಸಮೀಪಿಸಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಆತನು ಶಿಷ್ಯರ ಬಳಿಗೆ ಬಂದು ಅವರಿಗೆ, “ನೀವು ಇನ್ನು ನಿದ್ದೆ ಮಾಡಿ ವಿಶ್ರಮಿಸಿಕೊಳ್ಳುತ್ತಿದ್ದೀರೋ; ಇಗೋ, ಅ ಗಳಿಗೆ ಸಮೀಪಿಸಿತು, ಈಗ ಮನುಷ್ಯಕುಮಾರನು ಪಾಪಿಷ್ಠರ ಕೈಗೆ ಒಪ್ಪಿಸಲ್ಪಡುತ್ತಾನೆ.
Kannada BSI Bible 2016
ತರುವಾಯ ಆತನು ತನ್ನ ಶಿಷ್ಯರ ಬಳಿಗೆ ಬಂದು ಅವರಿಗೆ--ಈಗ ನಿದ್ದೆ ಮಾಡಿ ವಿಶ್ರಾಂತಿತಕ್ಕೊಳ್ಳಿರಿ; ಇಗೋ, ಮನುಷ್ಯಕುಮಾರನು ಪಾಪಿಷ್ಠರ ಕೈಗಳಿಗೆ ಹಿಡಿದು ಕೊಡಲ್ಪಡುವ ಸಮಯವು ಸವಿಾಪಿಸಿದೆ;
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಶಿಷ್ಯರ ಬಳಿಗೆ ಬಂದು ಅವರಿಗೆ - ನೀವು ಇನ್ನೂ ನಿದ್ದೆಮಾಡಿ ದಣುವಾರಿಸಿಕೊಳ್ಳಿರಿ; ಇಗೋ, ಗಳಿಗೆ ಸಮೀಪಿಸಿತು, ಈಗ ಮನುಷ್ಯಕುಮಾರನು ದುರ್ಜನರ ಕೈಗೆ ಒಪ್ಪಿಸಲ್ಪಡುತ್ತಾನೆ.
Kannada Bible (KNCL) BSI 2016
ಅದಾದ ಬಳಿಕ ಶಿಷ್ಯರನ್ನು ಸಮೀಪಿಸಿ, “ನೀವು ಇನ್ನೂ ನಿದ್ರಿಸಿ ವಿಶ್ರಮಿಸುತ್ತಾ ಇರುವಿರೋ? ಸಾಕು, ಸಮಯ ಸಮೀಪಿಸಿಬಿಟ್ಟಿತು. ನರಪುತ್ರನು ದುರ್ಜನರ ಕೈವಶವಾಗಲಿದ್ದಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ಯೇಸು ತಮ್ಮ ಶಿಷ್ಯರ ಬಳಿಗೆ ಬಂದು ಅವರಿಗೆ, “ಇನ್ನೂ ವಿಶ್ರಮಿಸುತ್ತಿದ್ದೀರಾ? ಇಗೋ, ಮನುಷ್ಯಪುತ್ರನಾದ ನಾನು ಪಾಪಿಗಳ ಕೈವಶವಾಗುವ ಸಮಯವು ಸಮೀಪಿಸಿದೆ.