Matthew 26:47 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಮಾತಾಡುತ್ತಿರವಷ್ಟರಲ್ಲೇ ಯೂದನು ಅಲ್ಲಿಗೆ ಬಂದನು. ಯೂದನು ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾಗಿದ್ದನು. ಮಹಾಯಾಜಕರು ಮತ್ತು ಹಿರಿಯ ನಾಯಕರು ಕಳುಹಿಸಿದ್ದ ಅನೇಕ ಜನರು ಅವನೊಂದಿಗಿದ್ದರು. ಅವರು ಕತ್ತಿ ಮತ್ತು ದೊಣ್ಣೆಗಳನ್ನು ಹಿಡಿದುಕೊಂಡಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಇನ್ನೂ ಮಾತನಾಡುತ್ತಿರುವಾಗಲೇ, ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಬಂದನು. ಮುಖ್ಯಯಾಜಕರ ಹಾಗು ಜನರ ಹಿರಿಯರ ಕಡೆಯಿಂದ ಬಹು ಜನರ ಗುಂಪು ಕತ್ತಿ, ದೊಣ್ಣೆಗಳನ್ನು ಹಿಡಿದುಕೊಂಡು ಅವನ ಸಂಗಡ ಬಂದರು.
Kannada BSI Bible 2016
ಆತನು ಇನ್ನೂ ಮಾತನಾಡುತ್ತಿರುವಾಗ ಇಗೋ, ಪ್ರಧಾನಯಾಜಕರ ಮತ್ತು ಜನರ ಹಿರಿಯರ ಕಡೆಯಿಂದ ಕತ್ತಿ ದೊಣ್ಣೆಗಳೊಡನೆ ಬಂದ ದೊಡ್ಡ ಜನ ಸಮೂಹದೊಂದಿಗೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದನೂ ಬಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಇನ್ನೂ ಮಾತಾಡುತ್ತಿರಲು ಇಗೋ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಬಂದನು; ಮಹಾಯಾಜಕರು ಜನರ ಹಿರಿಯರು ಇವರ ಕಡೆಯಿಂದ ಬಹು ಜನರ ಗುಂಪು ಕತ್ತಿ ದೊಣ್ಣೆಗಳನ್ನು ಹಿಡುಕೊಂಡು ಅವನ ಸಂಗಡ ಬಂತು.
Kannada Bible (KNCL) BSI 2016
ಯೇಸುಸ್ವಾಮಿ ಇನ್ನೂ ಮಾತನಾಡುತ್ತಿದ್ದ ಹಾಗೆ, ಹನ್ನೆರಡುಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಅಲ್ಲಿಗೆ ಬಂದನು. ಖಡ್ಗಗಳನ್ನೂ ಲಾಠಿಗಳನ್ನೂ ಹಿಡಿದಿದ್ದ ಒಂದು ದೊಡ್ಡ ಗುಂಪು ಅವನೊಂದಿಗೆ ಇತ್ತು. ಮುಖ್ಯಯಾಜಕರೂ ಜನರ ಪ್ರಮುಖರೂ ಅವರನ್ನು ಕಳುಹಿಸಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಇನ್ನೂ ಮಾತನಾಡುತ್ತಿರುವಾಗಲೇ, ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಬಂದನು. ಮುಖ್ಯಯಾಜಕರ ಮತ್ತು ಜನರ ಹಿರಿಯರ ಕಡೆಯಿಂದ ಬಂದಿದ್ದ ಜನರ ದೊಡ್ಡ ಸಮೂಹವು ಖಡ್ಗ ದೊಣ್ಣೆಗಳನ್ನು ಹಿಡಿದುಕೊಂಡು ಅವನೊಂದಿಗಿತ್ತು.