Matthew 26:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಸಭಿಕರು, “ನಾವು ಪಸ್ಕಹಬ್ಬದ ಕಾಲದಲ್ಲಿ ಯೇಸುವನ್ನು ಬಂಧಿಸಲು ಸಾಧ್ಯವಿಲ್ಲ. ಏಕೆಂದರೆ ಜನರು ಕೋಪಗೊಂಡು ದಂಗೆ ಏಳಬಹುದು” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಆದರೂ ಹಬ್ಬದಲ್ಲಿ ಹಿಡಿಯಬಾರದು, ನಮ್ಮ ಜನರಲ್ಲಿ ಗದ್ದಲವಾದೀತು” ಎಂದು ಮಾತನಾಡಿಕೊಂಡರು.
Kannada BSI Bible 2016
ಆದರೆ ಅವರು ಜನರಲ್ಲಿ ಗದ್ದಲವಾದೀತು ಹಬ್ಬದಲ್ಲಿ ಬೇಡ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೂ - ಹಬ್ಬದಲ್ಲಿ ಹಿಡಿಯಬಾರದು, ನಮ್ಮ ಜನರಲ್ಲಿ ಗದ್ದಲವಾದೀತು ಎಂದು ಮಾತಾಡಿಕೊಂಡರು.
Kannada Bible (KNCL) BSI 2016
ಆದರೆ,, ‘ಹಬ್ಬದ ಸಂದರ್ಭದಲ್ಲಿ ನಾವು ಈ ಕಾರ್ಯವನ್ನು ಮಾಡಬಾರದು. ಏಕೆಂದರೆ ಜನರು ದಂಗೆಯೆದ್ದಾರು,’ ಎಂದೂ ಮಾತಾಡಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವರು, “ಜನರಲ್ಲಿ ಗದ್ದಲವಾದೀತು, ಹಬ್ಬದಲ್ಲಿ ಬೇಡ,” ಎಂದರು.