Matthew 26:50 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಯೇಸು, “ಸ್ನೇಹಿತನೇ, ನೀನು ಮಾಡಲು ಬಂದ ಕೆಲಸ ಇದೆಯೋ?” ಎಂದನು. ಕೂಡಲೇ ಆ ಜನರು ಬಂದು ಯೇಸುವನ್ನು ಹಿಡಿದು, ಬಂಧಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಅವನಿಗೆ, “ಗೆಳೆಯನೇ, ನೀನು ಯಾಕೆ ಬಂದಿರುವೇ” ಎಂದು ಹೇಳಿದನು. ಅವರು ಹತ್ತಿರಕ್ಕೆ ಬಂದು ಯೇಸುವಿನ ಮೇಲೆ ಕೈಹಾಕಿ ಆತನನ್ನು ಹಿಡಿದರು.
Kannada BSI Bible 2016
ಅದಕ್ಕೆ ಯೇಸು ಅವನಿಗೆ--ಸ್ನೇಹಿತನೇ, ನೀನು ಯಾಕೆ ಬಂದಿರುತ್ತೀ ಎಂದು ಕೇಳಿದನು; ಆಗ ಅವರು ಬಂದು ಯೇಸುವಿನ ಮೇಲೆ ಕೈಹಾಕಿ ಆತನನ್ನು ಹಿಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಅವನಿಗೆ - ಗೆಳೆಯನೇ, ನೀನು ಬಂದ ಕೆಲಸ ಇದೇಯೋ? ಎಂದು ಹೇಳಲು ಅವರು ಹತ್ತರಕ್ಕೆ ಬಂದು ಯೇಸುವಿನ ಮೇಲೆ ಕೈ ಹಾಕಿ ಆತನನ್ನು ಹಿಡಿದರು.
Kannada Bible (KNCL) BSI 2016
ಯೇಸು ಅವನಿಗೆ, “ಮಿತ್ರಾ, ನೀನು ಮಾಡಬಂದ ಕಾರ್ಯವನ್ನು ಮಾಡಿಮುಗಿಸು,” ಎಂದರು. ಆಗ ಆ ಜನರು ಹತ್ತಿರಕ್ಕೆ ಬಂದು, ಯೇಸುವನ್ನು ಹಿಡಿದು ಬಂಧಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಯೇಸು ಅವನಿಗೆ, “ಸ್ನೇಹಿತನೇ, ನೀನು ಮಾಡಲು ಬಂದ ಕೆಲಸವನ್ನು ಮುಗಿಸು,” ಎಂದು ಹೇಳಿದರು. ಕೂಡಲೇ ಆ ಜನರು ಮುಂದೆ ಬಂದು, ಯೇಸುವನ್ನು ಹಿಡಿದು ಬಂಧಿಸಿದರು.