Matthew 26:51 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಯೇಸುವಿನ ಶಿಷ್ಯರಲ್ಲೊಬ್ಬನು ತನ್ನ ಖಡ್ಗವನ್ನು ಹೊರಕ್ಕೆ ಸೆಳೆದು ಮಹಾಯಾಜಕನ ಸೇವಕನಿಗೆ ಹೊಡೆದು ಅವನ ಕಿವಿಯನ್ನು ಕತ್ತರಿಸಿಬಿಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ ಯೇಸುವಿನ ಸಂಗಡ ಇದ್ದವರಲ್ಲಿ ಒಬ್ಬನು ಕೈಚಾಚಿ ತನ್ನ ಕತ್ತಿಯನ್ನು ಹಿರಿದು ಮಹಾಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕತ್ತರಿಸಿ ಹಾಕಿದನು.
Kannada BSI Bible 2016
ಇಗೋ, ಯೇಸುವಿನ ಸಂಗಡ ಇದ್ದವರಲ್ಲಿ ಒಬ್ಬನು ಕೈಚಾಚಿ ತನ್ನ ಕತ್ತಿಯನ್ನು ಹಿರಿದು ಮಹಾ ಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕಡಿದುಹಾಕಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಿಡಿಯುತ್ತಲೆ ಯೇಸುವಿನ ಸಂಗಡ ಇದ್ದವರಲ್ಲಿ ಒಬ್ಬನು ಕೈಚಾಚಿ ತನ್ನ ಕತ್ತಿಯನ್ನು ಹಿರಿದು ಮಹಾಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕಡಿದುಹಾಕಿದನು.
Kannada Bible (KNCL) BSI 2016
ಕೂಡಲೆ ಯೇಸುವಿನ ಸಂಗಡ ಇದ್ದ ಒಬ್ಬನು ತನ್ನ ಖಡ್ಗವನ್ನು ಹಿರಿದು, ಪ್ರಧಾನಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕತ್ತರಿಸಿಬಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ, ಯೇಸುವಿನ ಸಂಗಡ ಇದ್ದವರಲ್ಲಿ ಒಬ್ಬನು ಕೈಚಾಚಿ ತನ್ನ ಖಡ್ಗವನ್ನು ಹಿರಿದು, ಮಹಾಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕಡಿದುಹಾಕಿದನು.